ದೊಡ್ಡಬಳ್ಳಾಪುರ: ನಿರ್ಗತಿಕ ಕಡು ಬಡವರಿಗಾಗಿ ಆಶ್ರಯ ಯೋಜನೆ ಅಡಿಯಲ್ಲಿ ಮೀಸಲಿಟ್ಟಿರುವ ಸ್ಥಳದಲ್ಲಿ ಪ್ರಭಾವಿಗಳು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಈ ಕುರಿತು ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅನಧಿಕೃತವಾಗಿ ನಿರ್ಮಾಣ ಮಾಡಲಾಗುತ್ತಿರುವ ಕಟ್ಟಡವನ್ನು ಈ ಕೂಡಲೇ ಅಧಿಕಾರಿಗಳು ನಿಲ್ಲಿಸಬೇಕು ಎಂದು ಆಗ್ರಹಿಸಿ ರಾಂಪುರ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ದೊಡ್ಡ ಬೆಳವಂಗಲ ಹೋಬಳಿಯ ರಾಂಪುರ ಗ್ರಾಮದಲ್ಲಿ ಸರ್ವೇ ನಂಬರ್ 129ರಲ್ಲಿ ಒಟ್ಟು 3 ಎಕರೆ ಒಂಬತ್ತು ಗುಂಟೆ ಜಾಗವಿದ್ದು ಸದರಿ ಜಾಗದಲ್ಲಿ ಎರಡು ಎಕರೆ ಪ್ರದೇಶವನ್ನು ಆಶ್ರಯ ಯೋಜನೆಗೆ ಮೀಸಲಿಡಲಾಗಿತ್ತು. ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶವನ್ನು ಕೂಡ ಮಾಡಿದ್ದಾರೆ. ಆದರೆ ಉಳಿದ ಒಂದು ಎಕರೆ 9 ಕುಂಟೆ ಜಾಗವನ್ನು ತುರೆಮಂದಿ ಎಂದು ನಿಗದಿ ಮಾಡಲಾಗಿದ್ದು ಸದರಿ ಜಾಗದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದನ್ನು ಸ್ಥಗಿತಗೊಳಿಸುವಂತೆ ಕೋರಿ ಸ್ಥಳೀಯ ಪಂಚಾಯಿತಿ ಕಚೇರಿಗೆ ಹಲವಾರು ಬಾರಿ ಅರ್ಜಿ ಸಲ್ಲಿಸಲಾಗಿದೆ. ಆದರೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ ವಹಿಸಿದ್ದಾರೆ. ಗ್ರಾಮಕ್ಕೆ ಸರ್ಕಾರಿ ಜಾಗವನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಅಗ್ರಹಿಸಿದರು.ಸ್ಥಳೀಯ ಗ್ರಾಮಸ್ಥ ರುದ್ರೇಗೌಡ ಮಾತನಾಡಿ, ಸರ್ಕಾರಿ ಜಾಗವನ್ನು ಉಳಿಸಬೇಕಿರುವ ಪಂಚಾಯಿತಿ ಅಧಿಕಾರಿಗಳಿಗೆ ನಾವು ಎಷ್ಟೇ ಮನವಿ ಸಲ್ಲಿಸಿ ಅರ್ಜಿ ಕೊಟ್ಟರು ಈವರೆಗೂ ಸ್ಥಳಕ್ಕೆ ಭೇಟಿ ನೀಡಿಲ್ಲ ಕಟ್ಟಡ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಸ್ಥರ ಮಾತಿಗೆ ಕಿಮ್ಮತ್ತು ಕೊಡುವುದಿಲ್ಲ. ಗ್ರಾಮ ನೈರ್ಮಲ್ಯ, ಮೂಲಭೂತ ಸೌಲಭ್ಯಗಳ ಕೊರತೆಗೂ ಸ್ಪಂದನೆ ಇಲ್ಲ ಎಂದು ಆರೋಪಿಸಿದರು.
ಗ್ರಾಮಸ್ಥ ಜಯರಾಮ್ ಮಾತನಾಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷತೆಯಿಂದ ಯಾವುದೇ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ದೂರಿದರು.ಪ್ರಾಂತ್ಯ ರೈತ ಸಂಘದ ಮುಖಂಡರಾದ ಪ್ರಭಾ ಬೆಳವಂಗಲ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಶಿಧರ್ , ವಾಲ್ಮಿಕಿ ಸಂಘದ ಅಧ್ಯಕ್ಷ ಶಿವಕುಮಾರ್, ಮುಖಂಡರಾದ ಆಂಜಿನಪ್ಪ, ಧನಂಜಯ್, ರಾಮಣ್ಣ, ರಾಂಪುರ ಹಾಗೂ ಕಾಲೋನಿಯ ಗ್ರಾಮಸ್ಥರು ಹಾಜರಿದ್ದರು.
ಫೋಟೋ8ಕೆಡಿಬಿಪಿ3- ಬಡವರ ಆಶ್ರಯ ಮನೆಗಳಿಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ವಿರೋಧಿಸಿ ದೊಡ್ಡಬೆಳವಂಗಲದಲ್ಲಿ ರಾಂಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.