ಮಂಡ್ಯ:

ಬಾಣಂತಿಯರು ಎದೆ ಹಾಲಿನ ಮಹತ್ವ ಅರಿತು ಮಗುವಿಗೆ ಹಾಲುಣಿಸುವ ಮೂಲಕ ಆರೋಗ್ಯವಂತ ಮಗುವಿನ ಬೆಳವಣಿಗೆಗೆ ಮುಂದಾಗಬೇಕು ಎಂದು ಸಿಡಿಪಿಒ ನಾರಾಯಣ್ ಕರೆ ನೀಡಿದರು.

ತಾಲೂಕಿನ ಹಳೇ ಬೂದನೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿ, ತಾಯಂದಿರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಸೊಪ್ಪು, ತರಕಾರಿ ಸೇರಿದಂತೆ ಅಗತ್ಯ ಪೌಷ್ಟಿಕ ಆಹಾರ ಸೇವಿಸಬೇಕು ಕಿವಿಮಾತು ಹೇಳಿದರು.

ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿಯಿಂದ ಕಾಲ ಕಾಲಕ್ಕೆ ಅಗತ್ಯ ಸಲಹೆ, ಮಾಹಿತಿ ಅಲ್ಲದೆ ಪೌಷ್ಟಿಕ ಆಹಾರ, ಔಷಧ ಪಡೆದು ಆರೋಗ್ಯ ವೃದ್ಧಿಸಿಕೊಳ್ಳಲು ಸಲಹೆ ನೀಡಿದರು.

ಈ ವೇಳೆ ಗ್ರಾಪಂ ಆಡಳಿತಾಧಿಕಾರಿ, ಸಿಡಿಪಿಒ ಎಂ.ಕೆ.ಕುಮಾರಸ್ವಾಮಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ದೊರೆಯುವ ವಿವಿಧ ಸವಲತ್ತುಗಳ ಮಾಹಿತಿ ನೀಡಿದರು.


ವೇದಿಕೆಯಲ್ಲಿ ಪಿಡಿಒ ಸ್ವಾಮಿ ಸಿ, ಆರೋಗ್ಯಾಧಿಕಾರಿ ಡಾ.ಶರತ್ ಚಂದ್ರ, ಅಂಗನವಾಡಿ ಮೇಲ್ವಿಚಾರಕಿ ಶಕುಂತಲಾ ಎಸ್ ಬಡಿಗೇರ, ರೈತ ಮುಖಂಡ ರಾಜೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ

ಮಂಡ್ಯ: ವೀರ ಮಡಿವಾಳ ಮಾಚಿದೇವ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಘದಲ್ಲಿ ಸದಸ್ಯತ್ವ ಪಡೆದಿರುವ ಸದಸ್ಯರ ಮಕ್ಕಳಿಗೆ ಮತ್ತು ಸಮುದಾಯದ ಮಕ್ಕಳಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಪೋಷಕರು ಹಾಗೂ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ಪ್ರಮಾಣಪತ್ರ ಅಥವಾ ಟಿಸಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಒಂದು ಪಾಸ್‌ಪೋರ್ಟ್ ಸೈಜ್ ಫೋಟೋವನ್ನು ನಂ.೨೨೨೪, ಒಂದನೇ ಕ್ರಾಸ್, ಗಾಂಧಿನಗರ, ಕರ್ನಾಟಕ ಬಾರ್ ಸರ್ಕಲ್ ಹತ್ತಿರ, ಮಂಡ್ಯ ಇಲ್ಲಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಲು ತಿಳಿಸಲಾಗಿದೆ. ಅರ್ಜಿಗಳನ್ನು ತಲುಪಿಸಲು ಆ.೨೮ ಕೊನೆಯ ದಿನಾಂಕವಾಗಿದೆ. ಕೆ.ಆರ್.ಪೇಟೆ ತಾಲೂಕನ್ನು ಹೊರತುಪಡಿಸಿ ಜಿಲ್ಲೆಯ ಉಳಿದ ತಾಲೂಕಿನ ಮಕ್ಕಳು ಮಾತ್ರ ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಘದ ಅಧ್ಯಕ್ಷ ಬಿ.ಟಿ.ಗುರುರಾಜ್-೯೯೦೦೮೭೯೦೫೬, ಸಿಇಓ ಎಚ್.ಆರ್.ಆಶಾ- ೮೭೪೭೯೬೬೮೯೯ ಸಂಪರ್ಕಿಸುವಂತೆ ಕೋರಲಾಗಿದೆ.