ಗುಣಮಟ್ಟದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಿ

| Published : Nov 27 2024, 01:03 AM IST

ಗುಣಮಟ್ಟದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆಯ 2ನೇ ವಾರ್ಡ್‌ನಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಜ್ಯಸರ್ಕಾರ ಕ್ಷೇತ್ರಗಳ ಅವಶ್ಯಕತೆಗೆ ಅನುಗುಣವಾಗಿ ಅನುದಾನ ನೀಡುತ್ತಿದ್ದು, ಈ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕಾದ ಕರ್ತವ್ಯ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಮಹಾನಗರ ಪಾಲಿಕೆಯ ವತಿಯಿಂದ ₹2.5 ಕೋಟಿ ವೆಚ್ಚದಲ್ಲಿ ಇಲ್ಲಿನ 2ನೇ ವಾರ್ಡ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ದಾವಣಗೆರೆ ನಗರ ಮತ್ತು ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರಂತರ ಅನುದಾನ ನೀಡುತ್ತಿದೆ. ಈ ಅನುದಾನದಲ್ಲಿ ಅವಶ್ಯಕತೆ ಇರುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸದೇ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಮಹಾಪೌರರಾದ ಕೆ.ಚಮನ್‌ಸಾಬ್ ಮಾತನಾಡಿ, ದಾವಣಗೆರೆಗೆ ಶಾಮನೂರು ಕುಟುಂಬದ ಕೊಡುಗೆ ಸಾಕಷ್ಟಿದ್ದು, ಅವರ ಅಭಿವೃದ್ಧಿ ಚಿಂತನೆ ಇತರರಿಗೆ ಮಾದರಿ ಆಗಿದೆ. ಸ್ವತಃ ಮುಖ್ಯಮಂತ್ರಿಗಳೇ ದಾವಣಗೆರೆ ಅಭಿವೃದ್ಧಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ದಾವಣಗೆರೆಯ ವಿವಿಧ ಕಡೆಗಳಲ್ಲಿ ಇ-ಸ್ವತ್ತು ಮಾಡಲು ಕೆಲವು ಗೊಂದಲ ಇದ್ದು, ಅವುಗಳನ್ನು ಬಗೆಹರಿಸುವಂತೆ ಸಂಸದರು, ಸಚಿವರು, ಶಾಸಕರು ಸೂಚನೆ ನೀಡಿದ್ದು ನಾಗರೀಕರು ತಮ್ಮ ದಾಖಲೆಗಳನ್ನು ಸರಿಪಡಿಕೊಳ್ಳುವಂತೆ ಕರೆ ನೀಡಿದರು.

ಈ ವೇಳೆ ಉಪ ಮಹಾಪೌರರಾದ ಸೋಗಿ ಶಾಂತಕುಮಾರ್, ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಧಾ ಇಟ್ಟಿಗುಡಿ ಮಂಜುನಾಥ್, ಸವಿತಾ ಗಣೇಶ್ ಹುಲ್ಮನಿ, ಆಶಾ ಉಮೇಶ್, ಸದಸ್ಯರಾದ ನೂರ್‌ಜಹಾನ್ ಬೀ, ಜಾಕೀರ್ ಅಲಿ, ಜಿ.ಡಿ.ಪ್ರಕಾಶ್, ಕಬೀರ್ ಅಲಿ, ದಾದಾಪೀರ್ (ಅಯ್ಯಪ್ಪ ದಾದು) ಶಫೀಕ್‌ ಪಂಡಿತ್, ಮಹಾನಗರ ಪಾಲಿಕೆ ಅಭಿಯಂತರರು ಸೇರಿ ಅನೇಕರಿದ್ದರು.