ಅನಾರೋಗ್ಯಕರ ಜೀವನಶೈಲಿ ಕ್ಯಾನ್ಸರ್ ಬರಲು ಮುಖ್ಯ ಕಾರಣ: ಡಾ. ಆರ್.ಸಿ. ಕೊರವನವರ

| Published : Nov 14 2025, 03:15 AM IST

ಅನಾರೋಗ್ಯಕರ ಜೀವನಶೈಲಿ ಕ್ಯಾನ್ಸರ್ ಬರಲು ಮುಖ್ಯ ಕಾರಣ: ಡಾ. ಆರ್.ಸಿ. ಕೊರವನವರ
Share this Article
  • FB
  • TW
  • Linkdin
  • Email

ಸಾರಾಂಶ

ಕ್ಯಾನ್ಸರ್ ಅಸಹಜವಾದ ಜೀವಕೋಶಗಳ ಅನಿಯಂತ್ರಿತ ಬೆಳವಣಿಗೆಯ ಗಡ್ಡೆಯಾಗಿರುತ್ತದೆ. ಅನಾರೋಗ್ಯಕರ ಜೀವನಶೈಲಿ ಕ್ಯಾನ್ಸರ್ ಬರಲು ಮುಖ್ಯ ಕಾರಣವಾಗಿದೆ. ಆರಂಭಿಕ ಹಂತದಲ್ಲಿ ಪತ್ತೆಹಚ್ಚಿ ಚಿಕಿತ್ಸೆಗೆ ಒಳಪಡಿಸಿದರೆ ಈ ರೋಗವನ್ನು ವಾಸಿ ಮಾಡಬಹುದು.

ನರಗುಂದ: ಕ್ಯಾನ್ಸರ್ ಮಾರಕ ರೋಗವಾಗಿದೆ. ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ತೋರದೇ ಪ್ರತಿಯೊಬ್ಬರೂ ಆರೋಗ್ಯ ಕಡೆ ಗಮನ ನೀಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ. ಆರ್.ಸಿ. ಕೊರವನವರ ತಿಳಿಸಿದರು.

ಗುರುವಾರ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ಯಾನ್ಸರ್ ಅಸಹಜವಾದ ಜೀವಕೋಶಗಳ ಅನಿಯಂತ್ರಿತ ಬೆಳವಣಿಗೆಯ ಗಡ್ಡೆಯಾಗಿರುತ್ತದೆ. ಅನಾರೋಗ್ಯಕರ ಜೀವನಶೈಲಿ ಕ್ಯಾನ್ಸರ್ ಬರಲು ಮುಖ್ಯ ಕಾರಣವಾಗಿದೆ. ಆರಂಭಿಕ ಹಂತದಲ್ಲಿ ಪತ್ತೆಹಚ್ಚಿ ಚಿಕಿತ್ಸೆಗೆ ಒಳಪಡಿಸಿದರೆ ಈ ರೋಗವನ್ನು ವಾಸಿ ಮಾಡಬಹುದು ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಆರ್. ದೇಸಾಯಿ ಮಾತನಾಡಿ, ದೇಶದಲ್ಲಿ ಸುಮಾರು 2.98 ಕೋಟಿ ಜನರು ಕ್ಯಾನ್ಸರ್‌ನೊಂದಿಗೆ ಜೀವಿಸುತ್ತಿದ್ದು, ಪ್ರತಿ ವರ್ಷ 1.6 ಮಿಲಿಯನ್ ಹೊಸ ರೋಗಿಗಳ ಪತ್ತೆಯಾಗುತ್ತಿದ್ದಾರೆ. ದಿನನಿತ್ಯ ಯೋಗ, ಪ್ರಾಣಾಯಾಮ, ಧ್ಯಾನ, ನೈಸರ್ಗಿಕವಾದ ಆಹಾರ ಸೇವನೆ, ಮಾನಸಿಕ ನೆಮ್ಮದಿ ಮುಂತಾದ ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ರೋಗ ಬರದಂತೆ ತಡೆಗಟ್ಟಬಹುದು ಎಂದರು.

ಈ ಸಂದರ್ಭದಲ್ಲಿ ಡಾ. ರವಿ ಕಡಗಾವಿ, ಡಾ. ಐಶ್ವರ್ಯ, ಡಾ. ಸಹನಾ ಪಿಳ್ಳೆ, ಡಾ. ಮಂಜುನಾಥ ಕುದುರಿ, ಎಸ್.ಎಚ್. ಕಲೂತಿ, ಶಿವಾನಂದ ಕುರಹಟ್ಟಿ, ಎಂ.ಪಿ. ಶಿಗ್ಗಾಂವಕರ, ಬಸವಾರಜ ಕೌಜಗೇರಿ, ಎಂ.ಎಂ. ಮಸೂತಿಮನಿ, ರೇಖಾ ಮಜ್ಜಗಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು. ಐ.ಆರ್. ಗಂಜಿ ಸ್ವಾಗತಿಸಿದರು. ಸಿ.ಎಫ್. ಕುಂಬಾರ ನಿರೂಪಿಸಿ, ವಂದಿಸಿದರು.ಇಂದು ಪೋಷಕ- ಶಿಕ್ಷಕರ ಮಹಾಸಭೆ

ಗದಗ: ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆಯಿಂದ ನ. 14ರಂದು ಬೆಳಗ್ಗೆ 11ಕ್ಕೆ ಮಕ್ಕಳ ದಿನಾಚಾರಣೆ ಪ್ರಯುಕ್ತ ಜಿಲ್ಲಾದ್ಯಂತ ಏಕಕಾಲದಲ್ಲಿ 2025- 26ನೇ ಸಾಲಿನ ಪೋಷಕ- ಶಿಕ್ಷಕರ ಮಹಾಸಭೆಯನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪಪೂ ಕಾಲೇಜುಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ‌.ಎನ್‌. ಶ್ರೀಧರ ಮನವಿ ಮಾಡಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಲೆಯು ಸಮುದಾಯದ ಒಂದು ಭಾಗವಾಗಿದ್ದು, ಭಾಗೀದಾರರು ಹಾಗೂ ಪೋಷಕರ ವಿಶ್ವಾಸ ಮತ್ತು ಸಹಕಾರವು ಸರ್ಕಾರಿ ಶಾಲಾ- ಕಾಲೇಜುಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ. ರಾಷ್ಟ್ರ ನಿರ್ಮಾಣ ಮತ್ತು ಚೈತನ್ಯಶೀಲ ಸಮಾಜ ನಿರ್ಮಾಣದ ಸಹಕಾರಕ್ಕಾಗಿ ಅರ್ಹ ವಯೋಮಾನದ ಎಲ್ಲ ಮಕ್ಕಳು ಶಾಲೆಗೆ ದಾಖಲಾಗಿ ನಿರಂತರವಾಗಿ ಹಾಜರಾಗಿ ಗುಣಮಟ್ಟದ ಶಿಕ್ಷಣ ಪಡೆಯುವುದು ಅತ್ಯಗತ್ಯವಾಗಿರುತ್ತದೆ.ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಸರ್ಕಾರದಿಂದ ಅನುಷ್ಠಾನಗೊಳಿಸಲಾಗುತ್ತಿರುವ ಉಪಕ್ರಮಗಳು ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಪೋಷಕ- ಶಿಕ್ಷಕ ಸಭೆಗಳ ಉದ್ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು, ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯವಾಗಿ ಭಾಗವಹಿಸಬೇಕೆಂದು ತಿಳಿಸಿದ್ದಾರೆ.