ಸಾರಾಂಶ
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸಮೀಪದ ಶಾಂತಳ್ಳಿ ಸರ್ಕಾರಿ ಶಾಲೆಯಲ್ಲಿ ನೂತನವಾಗಿ ತೆರೆಯಲಾಗಿರುವ ಆಂಗ್ಲ ಮಾಧ್ಯಮ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯಿಂದ ಸಮವಸ್ತ್ರ ವಿತರಿಸಲಾಯಿತು.ಈ ಸಂದರ್ಭ ಆಂಗ್ಲ ಮಾಧ್ಯಮ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಜಿ.ಮೇದಪ್ಪ, ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯ ಪರಮೇಶ್ವರ ಸ್ವಾಮಿ, ಹಿರಿಯ ಸಾಹಿತಿ ಜಲಾ ಕಾಳಪ್ಪ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಕೆ.ಎಸ್. ರಾಮಚಂದ್ರ, ಕೆ.ಟಿ. ರಾಜಶೇಖರ್, ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ಕೃಷ್ಣಕುಮಾರ್, ಮನೋಹರ್, ಸರ್ಕಾರಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಸಿ. ಗುರುಪ್ರಸಾದ್ ಸೇರಿದಂತೆ ಇತರರು ಇದ್ದರು.---------------------------------------
24 ರಂದು ಕಾಫಿ ದಸರಾ, ಕಾಫಿಯ ವೈವಿಧ್ಯಮಯ ಖಾದ್ಯಗಳ ಸ್ಪರ್ಧೆಮಡಿಕೇರಿ: ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಸೆ. 24 ರಂದು ಬುಧವಾರ ಆಯೋಜಿತ ಎರಡನೇ ವರ್ಷದ ಕಾಫಿ ದಸರಾ ಸಂದರ್ಭ ಕಾಫಿಯಿಂದ ತಯಾರಿಸಲ್ಪಡುವ ವೈವಿಧ್ಯಮಯ ಖಾದ್ಯಗಳ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಮತ್ತು ಕಾಫಿ ದಸರಾ ಸಮಿತಿ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.ಕಾಫಿಯ ಮಹತ್ವ ತಿಳಿಸಲು ಮಾಹಿತಿಯುಕ್ತ ಸ್ಪರ್ಧೆಯನ್ನು ಸೆ.24 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಕಾಫಿ ಫ್ಲೆವರ್ ಕೇಕ್ ವಿಭಾಗ , ಕಾಫಿ ಫ್ಲೆವರ್ ಕಪ್ ಕೇಕ್ ವಿಭಾಗ , ಕಾಫಿ ಫ್ಲೆವರ್ ಬ್ರೌನಿ ವಿಭಾಗ, ಕಾಫಿ ಫ್ಲೆವರ್ ಬಿಸ್ಕತ್ ವಿಭಾಗ, ಕಾಫಿ ಫ್ಲೆವರ್ ಪುಡ್ಡಿಂಗ್ ವಿಭಾಗ. ವಿಭಿನ್ನ ರುಚಿಯಿರುವ ಕಾಫಿ ಪಾನೀಯವಿಭಾಗ ಮತ್ತು ಕಾಫಿ ಫ್ಲೇವರ್ ಚಾಕಲೇಟ್ ವಿಭಾಗ ಒಳಗೊಂಡಂತೆ 7 ವಿಭಾಗಗಳಲ್ಲಿ ಸ್ಪರ್ಧೆಗಳು ಆಯೋಜಿತವಾಗಿದೆ. ಸೆ. 22 ರೊಳಗಾಗಿ ಸ್ಪರ್ಧಿಗಳು ತಮ್ಮ ಹೆಸರು ನೋಂದಾಯಿಸಲು ಸಂಪರ್ಕಿಸಬೇಕಾದ ಸಂಖ್ಯೆ - ಮೇಪಾಡಂಡ ಸವಿತಾ ಕೀರ್ತನ್ .9448309814