ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಬೆಳಿಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು, ಅವರನ್ನು ಮಠ ಮತ್ತು ಪಕ್ಷದ ವತಿಯಿಂದ ಸ್ವಾಗತಿಸಲಾಯಿತು.

ಬಳಿಕ ಕನಕನ ಕಿಂಡಿ ಮತ್ತು ನವಗ್ರಹ ಕಿಂಡಿಗಳ ಮೂಲಕ ದೇವರ ದರ್ಶನ ಮಾಡಿದ ಸಚಿವೆ ಪರ್ಯಾಯ ಪೀಠಾಧೀಶರಾದ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಶ್ರೀ ಕೃಷ್ಣಮಠದಲ್ಲಿ ಕೃಷ್ಣನ ನೈವೇದ್ಯಕ್ಕಾಗಿ ಹಾಲು ಕಾಯಿಸಲು ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆ (ಪಾಯದ ಕೋಣೆ)ಯನ್ನು ಸಚಿವೆ ದೀಪ ಬೆಳಗಿ ಉದ್ಘಾಟಿಸಿದರು. ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರ ಶ್ರೀಶ ಭಟ್ ಕಡೇಕಾರು ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪರ್ಯಾಯ ಸ್ವಾಗತ ಸಮಿತಿ ಮಟ್ಟಾರ್ ರತ್ನಾಕರ ಹೆಗ್ಡೆ, ಮಧುಕರ್ ಮುದ್ರಾಡಿ ಮುಂತಾದವರಿದ್ದರು.