ಆಡಳಿತಾರೂಢ ರಾಜ್ಯ ಸರ್ಕಾರ ಬಿಟ್ಟಿ ಯೋಜನೆಗಳನ್ನು ನೀಡುವ ಮೂಲಕ ರಾಜ್ಯವನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿದ್ದಾರೆ. ಏಳೂವರೆ ಲಕ್ಷ ಕೋಟಿ ಸಾಲ ಮಾಡಿರುವ ರಾಜ್ಯ ಸರ್ಕಾರ ಪ್ರತಿಯೊಬ್ಬರ ತಲೆಯ ಮೇಲೆ ಒಂದುವರೆ ಲಕ್ಷ ಸಾಲವನ್ನು ವರಿಸಿದ್ದಾರೆ. ವೋಟ್ ಪಡೆದು ಈ ರೀತಿಯ ಬಿಟ್ಟಿ ಯೋಜನೆಗಳನ್ನು ನೀಡಿರುವ ಈ ಸರ್ಕಾರಕ್ಕೆ ನೀವು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು ಮುಂಬರುವ ಚುನಾವಣೆಯಲ್ಲಿ ಜನಪರ ರೈತಪರ ಸರ್ಕಾರಕ್ಕೆ ನಿಮ್ಮೆಲ್ಲರ ಆಶೀರ್ವಾದ ಮಾಡಬೇಕೆಂದ ಅವರು ಈ ಭಾಗದ ಪ್ರಮುಖ ಸಮಸ್ಯೆಯಾದ ಶೀತಪೀಡಿತ ಗ್ರಾಮಗಳ ಪುನರ್ವಸ್ಥಿತಿಗಾಗಿ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಬಂದರೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದಾಗಿ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಆಲೂರು

ಕಳೆದ ಹಲವು ದಶಕಗಳಿಂದ ಈ ಭಾಗದಲ್ಲಿ ನಡೆಯುತ್ತಿರುವ ಕಾಡಾನೆ ಹಾಗೂ ಮಾನವನ ನಡುವಿನ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಈಗಾಗಲೇ ಕೇಂದ್ರ ಅರಣ್ಯ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದು, ಈ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಿನ ತಿಂಗಳ 5ನೇ ತಾರೀಖಿನ ನಂತರ ಕನಕಪುರ ಹಾಗೂ ಹಾಸನದ ಭಾಗಗಳಿಗೆ ಎರಡು ದಿನ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.ಕಾರ್ಯಕ್ರಮ ನಿಮಿತ್ತ ತಾಲೂಕಿನ ಹುಣಸುವಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಡಾನೆ ಸಮಸ್ಯೆ ಸಂಬಂಧವಾಗಿ ಈ ಭಾಗದಿಂದ ಬಂದಿದ್ದ ನಿಯೋಗದೊಂದಿಗೆ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿ ದೆಹಲಿಯಲ್ಲಿ ಸಭೆ ನಡೆಸಿದ್ದು ಸುತ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದವರು ಅಳಿತಾರೂಢ ರಾಜ್ಯ ಸರ್ಕಾರ ಬಿಟ್ಟಿ ಯೋಜನೆಗಳನ್ನು ನೀಡುವ ಮೂಲಕ ರಾಜ್ಯವನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿದ್ದಾರೆ. ಏಳೂವರೆ ಲಕ್ಷ ಕೋಟಿ ಸಾಲ ಮಾಡಿರುವ ರಾಜ್ಯ ಸರ್ಕಾರ ಪ್ರತಿಯೊಬ್ಬರ ತಲೆಯ ಮೇಲೆ ಒಂದುವರೆ ಲಕ್ಷ ಸಾಲವನ್ನು ವರಿಸಿದ್ದಾರೆ. ವೋಟ್ ಪಡೆದು ಈ ರೀತಿಯ ಬಿಟ್ಟಿ ಯೋಜನೆಗಳನ್ನು ನೀಡಿರುವ ಈ ಸರ್ಕಾರಕ್ಕೆ ನೀವು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು ಮುಂಬರುವ ಚುನಾವಣೆಯಲ್ಲಿ ಜನಪರ ರೈತಪರ ಸರ್ಕಾರಕ್ಕೆ ನಿಮ್ಮೆಲ್ಲರ ಆಶೀರ್ವಾದ ಮಾಡಬೇಕೆಂದ ಅವರು ಈ ಭಾಗದ ಪ್ರಮುಖ ಸಮಸ್ಯೆಯಾದ ಶೀತಪೀಡಿತ ಗ್ರಾಮಗಳ ಪುನರ್ವಸ್ಥಿತಿಗಾಗಿ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಬಂದರೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದಾಗಿ ಭರವಸೆ ನೀಡಿದರು.ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಯನ್ನು ರದ್ದುಪಡಿಸಿರುವುದು ನಮ್ಮ ಗಮನಕ್ಕೆ ಬಂದಿದೆ ಕೇಂದ್ರ ರೈಲ್ವೆ ಸಚಿವರೊಂದಿಗೆ ಚರ್ಚಿಸಿ ಶೀಘ್ರ ನಿಲುಗಡಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಅವರು ಈ ಭಾಗದ ಜನರ ಆಶೀರ್ವಾದದಿಂದ ದೇವೇಗೌಡರಿಗೆ ರಾಜಕೀಯವಾಗಿ ಈವರೆಗೆ ಬೆಳೆದಿದ್ದು ನಿಮ್ಮೆಲ್ಲರ ಋಣ ನಮ್ಮ ಮೇಲಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಋಣ ತೀರಿಸಲು ಶ್ರಮಿಸುವುದಾಗಿ ತಿಳಿಸಿದರುಮಾಜಿ ಶಾಸಕ ಎಚ್ ಕೆ ಕುಮಾರಸ್ವಾಮಿ ಮಾತನಾಡಿ ರೈತರು ಬಡವರ್ಗದವರ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಜನಪರ ಕಾಳಜಿ ಹೊಂದಿರುವ ವ್ಯಕ್ತಿಯಾಗಿದ್ದಾರೆ. ಈ ಭಾಗದ ಪ್ರಮುಖ ಸಮಸ್ಯೆಯಾದ ಕಾಡಾನೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದ್ದು ಶೀಘ್ರ ಈ ಸಮಸ್ಯೆಗಳನ್ನು ಪರಿಹರಿಸುವರೆಂಬ ನಂಬಿಕೆ ನಮಗಿದ್ದು ದೇವರ ಕೃಪೆ ಹಾಗೂ ನಿಮ್ಮೆಲ್ಲರ ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ಈ ಭಾಗದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ ಎಸ್ ಮಂಜೇಗೌಡ, ಜೆಡಿಎಸ್ ಮುಖಂಡ ಜಿ ಟಿ ದೇವೇಗೌಡ , ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹುಣಸವಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಉಪಸ್ಥಿತರಿದ್ದರು.