ಹಿಂದು ಧರ್ಮ ಆಚಾರ್ಯ ಸಭಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಹಿಂದು ಧರ್ಮ ಆಚಾರ್ಯ ಸಭಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಶನಿವಾರ ನಗರದ ಹೊರವಲಯದ ನೆಲಮಂಗಲ ಬಳಿಯ ನಗರೂರಿನಲ್ಲಿರುವ ಬಿಜಿಎಸ್‌ ವಿಜ್ಞಾತಂ ಮೈದಾನದಲ್ಲಿ ಧಾರ್ಮಿಕ ಮುಖಂಡರು ಹಾಗೂ ಸಾಧು ಸಂತರ ನೇತೃತ್ವದಲ್ಲಿ ಹಿಂದು ಧರ್ಮ ಆಚಾರ್ಯ ಸಭಾದ ಕಾರ್ಯಕ್ರಮ ನಡೆಯಲಿದ್ದು, ಅಮಿತ್ ಶಾ ಅವರು ಬೆಳಗ್ಗೆಯಿಂದ ಸಂಜೆವರೆಗೆ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಂಜೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಆಸ್ಸಾಂನಿಂದ ಬೆಂಗಳೂರಿಗೆ ಸುಮಾರು 9.15ಕ್ಕೆ ವಿಶೇಷ ವಿಮಾನದಲ್ಲಿ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ 10.30ಕ್ಕೆ ನಗರೂರಿನಲ್ಲಿರುವ ಬಿಜಿಎಸ್‌ ವಿಜ್ಞಾತಂ ಮೈದಾನಕ್ಕೆ ತೆರಳುವ ಅವರು ಸಂಜೆ ಅಲ್ಲಿಂದಲೇ ಎಚ್‌ಎಎಲ್‌ ವಿಮಾನ ನಿಲ್ದಾಣದ ಮೂಲಕ ವಾಪಸಾಗಲಿದ್ದಾರೆ.