ಕೇಂದ್ರ‌ ಸಚಿವ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ

| Published : Apr 16 2024, 01:01 AM IST

ಸಾರಾಂಶ

ಸಾಂಕೇತಿಕವಾಗಿ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಏ.18ರಂದು ಮತ್ತೊಮ್ಮೆ ಬಿಜೆಪಿ ನಾಯಕರರೊಂದಿಗೆ ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೀದರ್‌

ಕೇಂದ್ರ ಸಚಿವ ಭಗವಂತಖೂಬಾ ಅವರು ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಎಂಎಸಿ ರಘುನಾಥ್ ರಾವ್ ಮಲ್ಕಾಪುರ, ಮಾಜಿ ಶಾಸಕ ಎಂ.ಜಿ. ಮೂಳೆ ಬಿಜೆಪಿ ಮುಖಂಡರ ಬಸವರಾಜ್ ಆರ್ಯ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಏ.18ರಂದು ಬಿಜೆಪಿ ಶಕ್ತಿ ಪ್ರದರ್ಶನದೊಂದಿಗೆ ಮತ್ತೊಮ್ಮೆ ಭಗವಂತ ಖೂಬಾ ನಾಮಪತ್ರ ಸಲ್ಲಿಸಲಿದ್ದು ಅಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್, ಸೇರಿದಂತೆ ರಾಜ್ಯದ ಬಿಜೆಪಿ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸೋಮವಾರ 3 ನಾಮಪತ್ರ ಸಲ್ಲಿಕೆ: ಲೋಕಸಭಾ ಸಾರ್ವತ್ರಿಕ ಚುನಾವಣೆ- 2024ರ ನಾಮಪತ್ರ ಸಲ್ಲಿಸಲು ಎರಡನೆಯ ದಿನವಾದ ಇಂದು ಸೋಮವಾರ ಲೋಕಸಭಾ ಸಾರ್ವತ್ರಿಕ ಚುನಾವಣಾ ಕ್ಷೇತ್ರದಿಂದ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.

ಬಿಜೆಪಿ ಅಭ್ಯರ್ಥಿಯಾಗಿ ಭಗವಂತ ಖೂಬಾ ಭಿ- ಫಾರ್ಮನೊಂದಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ರಿಯಾಜ್ ಅಹ್ಮದ್ ಅವರು ನಾಮಪತ್ರ ಸಲ್ಲಿಸಿದರು. ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್) ಪಕ್ಷದಿಂದ ರಮೇಶ್ ಜಯರಾಂ ನಾಮಪತ್ರ ಸಲ್ಲಿಸಿದರು.

ಏ.15ರಂದು ನಾಮಪತ್ರಗಳ ಸಲ್ಲಿಕೆಗೆ ಮಧ್ಯಾಹ್ನ 3 ಗಂಟೆಗಳ ವರೆಗೆ ಕಾಲಾವಕಾಶವಿತ್ತು. ಇಲ್ಲಿಯವರೆಗೆ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ. ಏ.19 ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.22 ನಾಮಪತ್ರಗಳ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.