ಶ್ರೀ ಶಾರದಾ ಪೀಠಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದರು. ಶನಿವಾರ ರಾತ್ರಿ ಶೃಂಗೇರಿಗೆ ಆಗಮಿಸಿ ವಾಸ್ತವ್ಯ ಹೂಡಿದರು. ಭಾನುವಾರ ಬೆಳಿಗ್ಗೆ ಶ್ರೀ ದೇವಾಲಯಕ್ಕೆ ತೆರಳಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದರು. ಶನಿವಾರ ರಾತ್ರಿ ಶೃಂಗೇರಿಗೆ ಆಗಮಿಸಿ ವಾಸ್ತವ್ಯ ಹೂಡಿದರು. ಭಾನುವಾರ ಬೆಳಿಗ್ಗೆ ಶ್ರೀ ದೇವಾಲಯಕ್ಕೆ ತೆರಳಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಶಂಕರಾಚಾರ್ಯ ದೇವಾಲಯ, ಶ್ರೀ ತೋರಣಗಣಪತಿ ದೇವಾಲಯ, ಶ್ರೀ ವಿದ್ಯಾಶಂಕರ ದೇವಾಲಯಗಳಿಗೆ ತೆರಳಿ ದರ್ಶನ ಪಡೆದರು. ಶ್ರೀ ಮಠದ ನರಸಿಂಹವನದ ಶ್ರೀ ಗುರುನಿವಾಸಕ್ಕೆ ತೆರಳಿ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಶೃಂಗೇರಿಯಿಂದ ಮಂಗಳೂರಿಗೆ ತೆರಳಿದರು. ಇದೊಂದು ಖಾಸಗಿ ಭೇಟಿಯೆಂದು ತಿಳಿದು ಬಂದಿದೆ.
30 ಶ್ರೀ ಚಿತ್ರ 1-ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ ನೀಡಿದರು.