ಡಿ.15ರಂದು ಕೇಂದ್ರ ಸಚಿವ ಎಚ್‌ಡಿಕೆ ಅಭಿನಂದನಾ ಸಮಾರಂಭ

| Published : Dec 06 2024, 09:00 AM IST

ಸಾರಾಂಶ

ಡಿ.೧೬ರಂದು ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಡಿ.೧೫ರಂದು ಸಂಜೆ ೫ಕ್ಕೆ ಮಂಡ್ಯ ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಸಲು ಜಿಲ್ಲಾ ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಡಿ.೧೬ರಂದು ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಡಿ.೧೫ರಂದು ಸಂಜೆ ೫ಕ್ಕೆ ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಸಲು ಜಿಲ್ಲಾ ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಡಿ.೧೫ರಂದು ಅಭಿನಂದನಾ ಸಮಾರಂಭ ಏರ್ಪಡಿಸಲಾಗುವುದು. ಸಮಾರಂಭದಲ್ಲಿ ವಿಕಲಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ತಿಳಿಸಲಾಗುವುದು.

ಸಮಾರಂಭಕ್ಕೆ ಲೋಕಸಭಾ ಕ್ಷೇತ್ರದ ೮ ವಿಧಾನಸಭಾ ಕ್ಷೇತ್ರಗಳಿಂದ ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಅದೇ ರಾತ್ರಿ ೧೨ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರಿಂದ ಬೃಹತ್ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಲಾಗುವುದು ಎಂದರು.

ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಕೆ.ಅನ್ನದಾನಿ, ಕೆ.ಸುರೇಶ್‌ಗೌಡ, ಜಿಲ್ಲಾಧ್ಯಕ್ಷ ಡಿ.ರಮೇಶ್, ಮುಖಂಡ ಬಿ.ಆರ್.ರಾಮಚಂದ್ರು, ನಗರಸಭೆ ಅಧ್ಯಕ್ಷ ನಾಗೇಶ್, ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್, ಸೇರಿದಂತೆ ಮತ್ತಿತರರಿದ್ದರು.

ಕ್ರೀಡಾಂಗಣ ಪರಿಶೀಲನೆ:

ಸಭೆಯ ನಂತರ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಕೆ.ಅನ್ನದಾನಿ, ಜಿಲ್ಲಾಧ್ಯಕ್ಷ ಡಿ.ರಮೇಶ್, ರಘುನಂದನ್ ಸೇರಿದಂತೆ ಮತ್ತಿತರರು ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ ಮಾಡಲು ಸ್ಥಳ ಪರಿಶೀಲನೆ ನಡೆಸಿದರು.

ಇಂದು ಉದ್ಯೋಗ ಕಲ್ಪಿಸಲು ನೇರ ಸಂದರ್ಶನ

ಮಂಡ್ಯ:

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮೆ.ವಿಎಂಪಸ್‌ಟೆಕ್ ಇಂಡಿಯಾ ಪ್ರೈ.ಲಿ., ಮೆ. ಐ.ಸಿ.ಐ.ಸಿ.ಐ ಬ್ಯಾಂಕ್, ಮತ್ತು ಮೆ.ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಗಳ ಸಹಯೋಗದಲ್ಲಿ ಸಂಸ್ಥೆಯಲ್ಲಿ ಖಾಲಿಯಿರುವಜೂನಿಯರ್ ಸಿಸ್ಟಂ ಇಂಜಿನಿಯರ್ಸ್ , ಲೋನ್ ಆಫೀಸರ್ಸ್ ಮತ್ತು ರಿಲೇಷನ್ ಮ್ಯಾನೇಜರ್ಸ್ ಹುದ್ದೆಗಳಿಗೆ ಡಿಪ್ಲಮೋ (ಸಿ.ಎಸ್) ಹಾಗೂ ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 32 ವರ್ಷದೊಳಗಿನ ಅಭ್ಯರ್ಥಿಗಳ ಆಯ್ಕೆಗಾಗಿ ಡಿ.6 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂರ್ದಶನ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ದೂ-08232-295124 ಮತ್ತು ಮೊ-9164642684, 8970646629 & 8660061488 ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.