ಕೇಂದ್ರ ಸಚಿವ ಕುಮಾರಸ್ವಾಮಿ ಇಂದು ಪಾದಯಾತ್ರೆಯಲ್ಲಿ ಭಾಗಿ

| Published : Aug 07 2024, 01:11 AM IST

ಸಾರಾಂಶ

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಮಂಡ್ಯ ನಗರಕ್ಕೆ ಆಗಮಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಚಾಲನೆ ನೀಡಲಿದ್ದಾರೆ. ನಂತರ ಪಾದಯಾತ್ರೆ ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಸಂಚರಿಸಲಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮೈಸೂರು ಮುಡಾ ಮತ್ತು ವಾಲ್ಮೀಕಿ ಹಗರಣ ವಿರೋಧಿಸಿ, ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ - ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಬುಧವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಗಡಿಭಾಗ ಮದ್ದೂರು ತಾಲೂಕು ನಿಡಘಟ್ಟದಿಂದ ಮಂಗಳವಾರ ನಡೆಸಿದ ಪಾದಯಾತ್ರೆ ಸಂಜೆ ನಗರದ ಹೊರವಲಯದ ಶಶಿಕಿರಣ್ ಕನ್ವೆಷನ್ ಹಾಲ್ ನಲ್ಲಿ ವಾಸ್ತವ್ಯ ಹೂಡಿದ್ದು, ಬುಧವಾರ ಬೆಳಗ್ಗೆ ಪಾದಯಾತ್ರೆ ಆರಂಭವಾಗಲಿದೆ.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಮಂಡ್ಯ ನಗರಕ್ಕೆ ಆಗಮಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಚಾಲನೆ ನೀಡಲಿದ್ದಾರೆ. ನಂತರ ಪಾದಯಾತ್ರೆ ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಸಂಚರಿಸಲಿದೆ.

ನಗರದ ಪ್ರಮುಖ ವೃತ್ತಗಳಲ್ಲಿ ಎಚ್ಡಿಕೆ ಸೇರಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನಾಯಕರುಗಳು ಕಾಂಗ್ರೆಸ್ ಸರ್ಕಾರದ ಹಗರಣ ವಿರುದ್ಧ ಮಾತನಾಡಲಿದ್ದಾರೆ. ನಂತರ ಮಂಡ್ಯ ಜಿಲ್ಲೆಯ ಗಡಿಭಾಗ ತೂಬಿನಕೆರೆ ಇಂಡಸ್ಟ್ರಿಯಲ್ ಏರಿಯಾಗೆ ಪಾದಯಾತ್ರೆ ತಲುಪಿ ವಾಸ್ತವ್ಯ ಹೂಡಲಿದೆ. ಗುರುವಾರ ಬೆಳಗ್ಗೆ ಶ್ರೀರಂಗಪಟ್ಟಣ ತಾಲೂಕಿಗೆ ಪಾದಯಾತ್ರೆ ಸಂಚರಿಸಲಿದೆ.