ಲೀಡ್‌ ಜೊತೆ.. ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ

| Published : Jul 06 2024, 12:46 AM IST

ಲೀಡ್‌ ಜೊತೆ.. ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ
Share this Article
  • FB
  • TW
  • Linkdin
  • Email

ಸಾರಾಂಶ

ಮಂಡ್ಯದಲ್ಲಿ ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ

ಕನ್ನಡಪ್ರಭ ವಾರ್ತೆ ಮೈಸೂರು

ಮಂಡ್ಯದಲ್ಲಿ ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಮಂಡ್ಯದಲ್ಲಿ ಜನತಾ ದರ್ಶನಕ್ಕೂ ಮುನ್ನ ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತಾ ದರ್ಶನದ ಬಗ್ಗೆನೇ ಸಚಿವ ಸಂಪುಟದ ಸಭೆ ಕರೆದು ಚರ್ಚೆ ಮಾಡಿದ್ದಾರೆ. ನೀವು ಅಧಿಕಾರಿಗಳನ್ನು ದೂರು ಇಡಬಹುದು. ಆದರೆ, ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.

ಈ ಹಿಂದೆ ಬೆಂಗಳೂರು ಗ್ರಾಮಾಂತರ ಸಂಸದರು ಈ ರೀತಿ ಸಭೆ ಮಾಡಿದ್ದಾಗ ಏನು ಮಾಡುತ್ತಿದ್ದೀರಿ? ಚುನಾವಣೆಗೆ ಬಂದು ಜನ ಸ್ಪಂದನ ಕಾರ್ಯಕ್ರಮ ಮಾಡಿದಾಗ ಎಲ್ಲಿ ಹೋಗಿದ್ರಿ? ಈಗ ಜನತಾ ದರ್ಶನ ತಪ್ಪಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.