ಮಲೆಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ

| Published : Jul 19 2025, 02:00 AM IST

ಸಾರಾಂಶ

ತಾಲೂಕಿನ ಪವಿತ್ರ ಯಾತ್ರಾಸ್ಥಳವಾದ ಮಲೆಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಕುಟುಂಬದೊಂದಿಗೆ ಆಗಮಿಸಿ ಶ್ರೀ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿದರು.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಪವಿತ್ರ ಯಾತ್ರಾಸ್ಥಳವಾದ ಮಲೆಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಕುಟುಂಬದೊಂದಿಗೆ ಆಗಮಿಸಿ ಶ್ರೀ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿದರು.

ಸಚಿವರ ಆಗಮನದ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎಂ.ಆರ್. ಮಂಜುನಾಥ್ ಮತ್ತು ಶ್ರೀಮಲೆಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ವಾದ್ಯಮೇಳಗಳೊಂದಿಗೆ ಭಕ್ತಿಪೂರ್ವಕವಾಗಿ ಆತ್ಮೀಯ ಸ್ವಾಗತ ಕೋರಿದರು.

ದೇವಾಲಯದ ದ್ವಾರಕ್ಕೆ ಆಗಮಿಸಿದ ಸಚಿವರು ಶ್ರೀ ಮಹದೇಶ್ವರ ಸ್ವಾಮಿಗೆ ನಮನ ಸಲ್ಲಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಸಾಲೂರು ಮಠಕ್ಕೆ ಭೇಟಿ:

ಲಿಂಗೈಕ್ಯ ಶ್ರೀಗಳಾದ ಗುರುಸ್ವಾಮಿಗಳ ಗದ್ದುಗೆ ಭೇಟಿ ನೀಡಿ ನಮನ ಸಲ್ಲಿಕೆ ಶಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಭೇಟಿ ನೀಡಿ ಮಠದಲ್ಲಿ ಆತಿತ್ಯ ಸ್ವೀಕರಿಸಿ ಶ್ರೀಗಳಿಗೆ ಗೌರವ ಸಲ್ಲಿಸಿದರು.

ಇದ್ದಕ್ಕೂ‌ಮೊದಲು ಸೋಮಣ್ಣರ 70ನೇ ವರ್ಷದ ಹುಟ್ಟುಹಬ್ಬಕ್ಕೆ ಇನ್ನೂ ಎರಡು ದಿನಗಳು ಬಾಕಿಯಿರುವ ಈ ವೇಳೆ, ಅವರ ಅಭಿಮಾನಿಗಳು ಶುಕ್ರವಾರದಂದು ಹನೂರು ಪಟ್ಟಣದಲ್ಲಿ ಕೇಕ್ ಕತ್ತರಿಸಿ, ಅನ್ನಸಂತರ್ಪಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್. ಮಂಜುನಾಥ್, ಬಿಜೆಪಿ ನಾಯಕರಾದ ಎಸ್. ದತ್ತೇಶ್ ಕುಮಾರ್, ನಿಶಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.