ಸಾರಾಂಶ
ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಜನರಲ್ ವಾರ್ಡ್ಗೆ ಭೇಟಿ ನೀಡಿ ರೋಗಿಗಳಿಗೆ ಶೀಘ್ರ ಗುಣ ಹೊಂದುತ್ತೀರಿ. ಯಾವುದೇ ಆತಂಕ ಬೇಡವೆಂದು ಧೈರ್ಯ ತುಂಬಿ, ಯಾವುದೇ ಕೊರತೆಯಾಗದಂತೆ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ತುಮಕೂರು
ಕೇಂದ್ರದ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದು ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಜಿಲ್ಲೆಯ ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿದ್ದ ರೋಗಿಗಳ ಆರೋಗ್ಯ ವಿಚಾರಿಸಿದರು.ಆಸ್ಪತ್ರೆಯ ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಜನರಲ್ ವಾರ್ಡ್ಗೆ ಭೇಟಿ ನೀಡಿ ರೋಗಿಗಳಿಗೆ ಶೀಘ್ರ ಗುಣ ಹೊಂದುತ್ತೀರಿ. ಯಾವುದೇ ಆತಂಕ ಬೇಡವೆಂದು ಧೈರ್ಯ ತುಂಬಿ, ಯಾವುದೇ ಕೊರತೆಯಾಗದಂತೆ ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್ ಮಾತನಾಡಿ, ಜಿಲ್ಲೆಯ ಮಧುಗಿರಿ ತಾಲೂಕು ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆಯಿಂದ ವಾಂತಿ-ಭೇದಿ ಪ್ರಕರಣಗಳು ಕಂಡು ಬಂದಿವೆ. ಮಾಹಿತಿ ತಿಳಿದ ಕೂಡಲೇ ತಾಲೂಕು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಂತಿ-ಭೇದಿಯಿಂದ ಅಸ್ವಸ್ಥರಾದವರ ಸೂಕ್ತ ಚಿಕಿತ್ಸೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಹಾಗೂ ಚಿಂತಾಜನಕ ಸ್ಥಿತಿಯಲ್ಲಿರುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್ ಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್ ಮುಂತಾದವರು ಹಾಜರಿದ್ದರು.