ಸಾರಾಂಶ
- ಕೆಂಚಿಕೊಪ್ಪ ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ
ಕನ್ನಡಪ್ರಭ ವಾರ್ತೆ, ತರೀಕೆರೆಸಂಜೀವಿನಿ ಯೋಜನೆ ಉದ್ದೇಶ ಸಾಕಾರಗೊಳಿಸಲು ಒಕ್ಕೂಟ ಪ್ರಯತ್ನಿಸಬೇಕೆಂದು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಜಿಲ್ಲಾ ವ್ಯವಸ್ಥಾಪಕ ಮಂಜೇಗೌಡ್ರು ಹೇಳಿದ್ದಾರೆ.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ತಾಲೂಕಿನ ಕೆಂಚಿಕೊಪ್ಪ ಗ್ರಾಮದಲ್ಲಿ ಏರ್ಪಡಿಸಿದ್ದ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿ ಮಹಿಳೆ ಒಕ್ಕೂಟದ ವ್ಯಾಪ್ತಿಗೆ ಬರುವಂತೆ ಹಾಗೂ ಸಂಜೀವಿನಿ ಯೋಜನೆಯಲ್ಲಿ ದೊರೆಯುವ ಸಮುದಾಯ ಬಂಡವಾಳ ನಿಧಿ, ದುರ್ಬಲ ವರ್ಗದವರ ನಿಧಿ, ಪ್ರಧಾನ ಮಂತ್ರಿ ಕಿರು ಆಹಾರ ಉದ್ಯಮ ಮುಂತಾದ ಯೋಜನೆಗಳ ಸದುಪಯೋಗದ ಬಗ್ಗೆ ತಿಳಿಸಿದರು.ಕೆಂಚಿಕೊಪ್ಪ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಹರಿಕೃಷ್ಣ ಅವರು ಮಾತನಾಡಿ ಇನ್ನಷ್ಟು ಮಹಿಳೆಯರಿಗೆ ಉತ್ತೇಜನ ನೀಡುತ್ತ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು ಹಾಗೂ ಮುಂದಿನ ಆರ್ಥಿಕ ಬೆಳವಣಿಗೆಗೆ 5000/- ರೂಗಳನ್ನು ಒಕ್ಕೂಟಕ್ಕೆ ದೇಣಿಗೆಯಾಗಿ ಅವರು ನೀಡಿದರು. ತಾಪಂ ಕಾರ್ಯಕ್ರಮ ವ್ಯವಸ್ಥಾಪಕ ಷಡಾಕ್ಷರಿ ಎಚ್ .ಸಿ. ಮಾತನಾಡಿ ಒಕ್ಕೂಟದ ರಚನೆ, ವಾರ್ಷಿಕ ಮಹಾಸಭೆಯಲ್ಲಿ ಒಕ್ಕೂಟದಲ್ಲಿ ನಿರ್ವಹಿಸಿದ ಹಣಕಾಸು ವ್ಯವಹಾರ, ಖರ್ಚು ವೆಚ್ಚಗಳು ಹಾಗೂ ಒಕ್ಕೂಟದ ಕಾರ್ಯಕಾರಿ ಸಮಿತಿ ಬದಲಾವಣೆ ನಿಯಮಗಳ ಬಗ್ಗೆ ಹಾಗೂ ಒಕ್ಕೂಟದಲ್ಲಿ ಕಾರ್ಯನಿರ್ವಹಿಸುವ ಎಮ್ ಬಿ ಕೆ, ಎಲ್ ಸಿ ಆರ್ ಪಿ, ಕೃಷಿಸಖಿ, ಪಶುಸಖಿ ಹಾಗೂ ಸ್ವಚ್ಛವಾಹಿನಿಯ ಮಹಿಳಾ ವಾಹನ ಚಾಲಕಿ ಕಾರ್ಯ ವೈಖರಿ ಬಗ್ಗೆ ವಿವರಿಸಿದರು. ಗ್ರಾಮ ಪಂಚಾಯಿತಿ ಪಶು ವೈದ್ಯಾಧಿಕಾರಿ ನವೀ ನ್ ಮಾತನಾಡಿ ಕೆಂಚಿಕೊಪ್ಪ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಪಶು ಸಖಿಯವರು ಎನ್ ಆರ್ ಎಲ್ ಎಮ್ ಹಾಗೂ ಪಶುಇಲಾಖೆಗೆ ಕೊಂಡಿ ಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ, ಇದರಿಂದ ಜಾನುವಾರುಗಳ ಲಸಿಕೆ, ವಿಮೆ ಬಗ್ಗೆ ತಿಳುವಳಿಕೆ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಕೆಂಚಿಕೊಪ್ಪ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಅಧ್ಯಕ್ಷ ಶ್ರೀಜನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆಂಚಿಕೊಪ್ಪ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಎನ್ ಆರ್ ಎಲ್ ಎಮ್, ತಾಲೂಕು ಎನ್ ಆರ್ ಎಲ್ ಎಮ್ ಹಾಗೂ ಒಕ್ಕೂಟದ ಸಿಬ್ಬಂದಿ, ಎಲ್ಲಾ ಎಸ್ ಎಚ್ ಜಿ ಮಹಿಳೆಯರು ಮಹಾಸಭೆಯಲ್ಲಿ ಉಪಸ್ಥಿತರಿದ್ದರು.
13ಕೆಟಿಆರ್.ಕೆ.8ಃತರೀಕೆರೆ ಸಮೀಪದ ಕೆಂಚಿಕೊಪ್ಪ ಗ್ರಾಮದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯಿಂದ ನಡೆದ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಚಿಕ್ಕಮಗಳೂರು ಜಿಪಂ ಜಿಲ್ಲಾ ವ್ಯವಸ್ಥಾಪಕ ಮಂಜೇಗೌಡ್ರು, ಕೆಂಚಿಕೊಪ್ಪ ಗ್ರಾಪಂ ಉಪಾಧ್ಯಕ್ಷ ಹರಿಕೃಷ್ಣ, ಕೆಂಚಿಕೊಪ್ಪ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ ಅಧ್ಯಕ್ಷ ಶ್ರೀಜನಿ, ತಾಪಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಷಡಾಕ್ಷರಿ ಎಚ್ ಸಿ ಮತ್ತಿತರರು ಇದ್ದರು.