ಸಾರಾಂಶ
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದಲ್ಲಿ ಗುರುವಾರ ನಡೆದ 78 ನೇ ಸ್ವಾತಂತ್ರೋತ್ಸವ ಆಚರಣೆಯ ಅಧ್ಯಕ್ಷತೆ ವಹಿಸಿರ್  ಶಾಸಕ ರಾಜೇಶ್ ನಾಯ್ಕ್  ಮಾತನಾಡಿದರು. ತಹಸೀಲ್ದಾರ್ ಅರ್ಚನಾ ಭಟ್ ಧ್ವಜಾರೋಹಣ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಭಾರತ ದೇಶದ ಭವಿಷ್ಯ ಮತ್ತು ಮುಂದಿನ ಜನಾಂಗಕ್ಕೆ ನಿರ್ಭೀತ ಜೀವನ ಮಾಡಲು ನಮ್ಮ ಹಿರಿಯರು ಸ್ವಾತಂತ್ರ್ಯ ವನ್ನು ತಂದು ಕೊಟ್ಟಿದ್ದಾರೆ. ಅವರ ತ್ಯಾಗ, ಬಲಿದಾನದ ನೆನಪು ಸದಾ ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯ ಆಗುವುದರ ಜೊತೆ, ದೇಶದ ಹಿತವನ್ನು ಕಾಪಾಡಲು ನಾವೆಲ್ಲರೂ ಒಂದಾಗಬೇಕು ಎಂದು ಬಂಟ್ವಾಳ ಶಾಸಕ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದ್ದಾರೆ.ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಆಡಳಿತ ಸೌಧದಲ್ಲಿ ಗುರುವಾರ ನಡೆದ 78 ನೇ ಸ್ವಾತಂತ್ರೋತ್ಸವ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಸೀಲ್ದಾರ್ ಅರ್ಚನಾ ಭಟ್ ಧ್ವಜಾರೋಹಣ ನೆರವೇರಿಸಿದರು.
ಸಿದ್ದಕಟ್ಟೆ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಲಿಖಿತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು.ಪೋಲೀಸ್ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕದಳ, ಎನ್.ಸಿ.ಸಿ. ಹಾಗೂ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಾಕೃತಿಕ ವಿಕೋಪದ ಸಂದರ್ಭದಲ್ಲಿ ಅವಿರತ ಸೇವೆ ಸಲ್ಲಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಮೆಸ್ಕಾಂ ಸಿಬ್ಬಂದಿ, ಅರಣ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಬಿ.ಎಲ್.ಒ ಗಳಿಗೆ, ಬಂಟ್ವಾಳ ಪುರಸಭಾ ಇಲಾಖೆಯ ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.ಬೂಡ ಅಧ್ಯಕ್ಷ ಬೇಬಿ ಕುಂದರ್, ತಾ.ಪಂ.ಇ.ಒ.ಸಚಿನ್, ತೋಟಗಾರಿಕೆ ಇಲಾಖೆ ಪ್ರದೀಪ್ ಡಿ.ಸೋಜ, ನಗರ ಪೋಲೀಸ್ ಠಾಣೆ ಇನ್‌ಸ್ಪೆಕ್ಟರ್ ಅನಂತಪದ್ಮನಾಭ, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಬಿ.ಇ.ಒ.ಮಂಜುನಾಥನ್, ಸಿ.ಡಿ.ಪಿ.ಒ.ಮಮ್ತಾಜ್, ಪುರಸಭಾ ಸಿ.ಒ.ಲೀನಾ ಬ್ರಿಟ್ಟೋ, ಅರಣ್ಯ ಇಲಾಖೆಯ ಪ್ರಫುಲ್ ರೈ, ಎ.ಪಿ.ಎಂ.ಸಿ.ಕಾರ್ಯದರ್ಶಿ ಸಮಂತ್ ಕುಮಾರ್ ಮತ್ತಿತರರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))