ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳ್ತಂಗಡಿಭಾರತದ ೧೪೦ ಕೋಟಿ ಜನಸಂಖ್ಯೆಯಲ್ಲಿ ಶೇ. ೬೦ ರಷ್ಟು ಇರುವ ಯುವಜನತೆ ದೇಶದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು ತಮ್ಮ ಶಕ್ತಿ-ಸಾಮರ್ಥ್ಯ ಹಾಗೂ ಪ್ರತಿಭೆಯನ್ನು ಸಮಾಜದ ಸರ್ವತೋಮುಖ ಪ್ರಗತಿಗೆ ವಿನಿಯೋಗಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.ಶುಕ್ರವಾರ ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ೧೫೦ನೆ ಜನ್ಮದಿನಾಚರಣೆ ಅಂಗವಾಗಿ ಪೊಲೀಸ್ ಇಲಾಖೆಯ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕಿನ ವಿವಿಧ ಸಂಘಟನೆಗಳು ಹಾಗೂ ಕಾಲೇಜುಗಳ ಎನ್.ಸಿ.ಸಿ. ಕೆಡೆಟ್‌ಗಳು ಮತ್ತು ರಾಷ್ಟ್ರೀಯ ಸೇವಾಯೋಜನೆಯ ಸ್ವಯಂ-ಸೇವಕರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಏಕತಾ ಓಟದ ಬಳಿಕ ಅವರು ಮಾತನಾಡಿದರು.ಬೆಳ್ತಂಗಡಿಯ ಹಿರಿಯ ವಕೀಲ ಬಿ.ಕೆ. ಧನಂಜಯ ರಾವ್ ಮಾತನಾಡಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ದೇಶಪ್ರೇಮ, ತ್ಯಾಗ ಮತ್ತು ಆದರ್ಶಗಳ ಅನುಷ್ಠಾನದೊಂದಿಗೆ ನಾವು ಅಖಂಡ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಬೇಕು ಎಂದರು.ಬೆಳ್ತಂಗಡಿ ಪಿ.ಎಸ್.ಐ. ಸುಬ್ಬಾಪುರ ಮಠ್, ಬಿ.ಜಿ. ಪ್ರತಿಜ್ಞಾವಿಧಿ ಬೋಧಿಸಿದರು.ಬದುಕುಕಟ್ಟೋಣ ತಂಡದ ಸಂಚಾಲಕರಾದ ಮೋಹನಕುಮಾರ್ ಮತ್ತು ರಾಜೇಶ್ ಪೈ, ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಪ್ರಮೋದ್ ಕುಮಾರ್, ನಿವೃತ್ತ ಯೋಧ ಎಂ.ವಿ. ಭಟ್ ಮುಂಡಾಜೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರೊ. ಮಹೇಶ್‌ಕುಮಾರ್ ಶೆಟ್ಟಿ ಮತ್ತು ಮಾಲಿನಿ ಅಂಚನ್ ಮತ್ತಿತರರಿದ್ದರು.ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ನಿರ್ವಹಿಸಿದರು. ವೇಣೂರು ಪೊಲೀಸ್ ಠಾಣಾ ಉಪನಿರೀಕ್ಷಕ ಅಕ್ಷಯ್ ದವಗಿ ವಂದಿಸಿದರು.ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಿಂದ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದ ವರೆಗೆ ಏಕತಾ ಓಟ ನಡೆಯಿತು.
;Resize=(128,128))
;Resize=(128,128))
;Resize=(128,128))
;Resize=(128,128))