ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ: ಜಿಲ್ಲೆಗೇ ಗುಂಡ್ಲುಪೇಟೆ ಪ್ರಥಮ!

| Published : Feb 27 2025, 12:32 AM IST

ಸಾರಾಂಶ

ರಾಷ್ಟ್ರೀಯ ಚುಚ್ಚುಮದ್ದು ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಇಲಾಖೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ (ಚುಚ್ಚು ಮದ್ದು) ದಲ್ಲಿ ಚಾಮರಾಜನಗರ ಜಿಲ್ಲೆ ಪ್ರಥಮ ಸ್ಥಾನಕ್ಕೇರಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ (ಚುಚ್ಚು ಮದ್ದು) ದಲ್ಲಿ ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲೆಯಲ್ಲಿ ಗುಂಡ್ಲುಪೇಟೆ ತಾಲೂಕು ಪ್ರಥಮ ಸ್ಥಾನದಲ್ಲಿದೆ.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ರಾಷ್ಟ್ರೀಯ ಚುಚ್ಚುಮದ್ದು ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಇಲಾಖೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ (ಚುಚ್ಚು ಮದ್ದು) ದಲ್ಲಿ ಚಾಮರಾಜನಗರ ಜಿಲ್ಲೆ ಪ್ರಥಮ ಸ್ಥಾನಕ್ಕೇರಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ (ಚುಚ್ಚು ಮದ್ದು) ದಲ್ಲಿ ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲೆಯಲ್ಲಿ ಗುಂಡ್ಲುಪೇಟೆ ತಾಲೂಕು ಪ್ರಥಮ ಸ್ಥಾನದಲ್ಲಿದೆ.

೨ ವರ್ಷ ತನಕ , ೫ ವರ್ಷ ತನಕ ಮಕ್ಕಳಿಗೆ ೬ ವಾರ, ೧೦ ವಾರ, ೧೪ ವಾರ, ೯ ತಿಂಗಳು, ೧.೫ ವರ್ಷದೊಳಗಿನ ಮಕ್ಕಳಿಗೆ ಚುಚ್ಚುಮದ್ದು ಹಾಕುವುದರಲ್ಲಿ ತಾಲೂಕು ಆರೋಗ್ಯ ಇಲಾಖೆಯು ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ೧೪ ಕಾಯಿಲೆಗಳ ವಿರುದ್ಧ ೧೪ ಲಸಿಕೆ (ಚುಚ್ಚುಮದ್ದು)ಗಳನ್ನು ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯ ಜೊತೆಗೆ ಉಪ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಗುರುವಾರ ಉಚಿತವಾಗಿ ನೀಡಲಾಗಿದೆ.

ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯ ಜೊತೆಗೆ ಉಪ ಆರೋಗ್ಯ ಕೇಂದ್ರಗಳಲ್ಲದೆ ಹೊರ ವಲಯಗಳಲ್ಲಿ ಲಸಿಕೆ ಹಾಕಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಶ ಹೇಳಿದ್ದಾರೆ. ೯ ತಿಂಗಳ ಮಕ್ಕಳಿಗೆ ಫುಲಿ ಯುಮಿನೇಶನ್‌, ೧.೫ ವರ್ಷದ ಮಕ್ಕಳಿಗೆ ಕಂಪ್ಲೀಟ್‌ ಯುಮಿನೇಶನ್‌ ಆಗಿದೆ. ಅಲ್ಲದೆ ತಾಲೂಕಿನಲ್ಲಿ ಕಳೆದ 6 ತಿಂಗಳಿಂದೀಚೆಗೆ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳ ಮೇಲುಸ್ತುವಾರಿಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಲಸಿಕೆ ಹಾಕಿದೆಯಾ? ಇಲ್ಲವಾ ಎಂದು ಮರು ಪರಿಶೀಲನೆ ಮಾಡುತ್ತಿರುವ ಕಾರಣ ಲಸಿಕಾ ಕಾರ್ಯಕ್ರಮದಲ್ಲಿ ಗುರಿ ಸಾಧಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿದೆ ಎಂದರು.

ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಗೆ ಗುಂಡ್ಲುಪೇಟೆ ಆರೋಗ್ಯ ಇಲಾಖೆ ಪ್ರಥಮ ಸ್ಥಾನ ಪಡೆದಿದೆ. ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.

-ಡಾ.ಅಲಿಂ ಪಾಶ, ತಾಲೂಕು ಆರೋಗ್ಯಾಧಿಕಾರಿಪುನರ್‌ ಮನನ ತರಬೇತಿ ಕಾರ್ಯಾಗಾರ

ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತಾಲೂಕಿನ ಸಮುದಾಯ ಆರೋಗ್ಯ ಆರೋಗ್ಯಾಧಿಕಾರಿಗಳಿಗೆ ಪುನರ್‌ ಮನನ ತರಬೇತಿ ಕಾರ್ಯಾಗಾರ ನಡೆಯಿತು. ಇನ್ಸ್ಟಿಟ್ಯೂಟ್‌ ಆಫ್ ಪಬ್ಲಿಕ್‌ ಹೆಲ್ತ್‌ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಮುದಾಯ ಆರೋಗ್ಯ ಆರೋಗ್ಯಾಧಿಕಾರಿಗಳಿಗೆ ಪುನರ್‌ ಮನನ ತರಬೇತಿ ಕಾರ್ಯಾಗಾರವನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಶ ಉದ್ಘಾಟಿಸಿದರು. ಕಾರ್ಯಾಗಾರದ ಮೂಲಕ ಎಲ್ಲ ಸಮುದಾಯ ಆರೋಗ್ಯಾಧಿಕಾರಿಗಳು ದಿನದ ವೃತ್ತಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಆ ಕೆಲಸ ಮುಂದುವರಿಯಲಿ ಎಂದರು. ಕಾರ್ಯಕ್ರಮದಲ್ಲಿ ಡಾ.ರವಿಕುಮಾರ್‌,ಡಾ.ಕೌಶಿಕ್‌,ಡಾ.ರಂಜಿತ್‌ ಹಾಗು ಸಮುದಾಯ ಆರೋಗ್ಯಾಧಿಕಾರಿಗಳು ಇದ್ದರು.