ಕನ್ನಡಪ್ರಭ ವಾರ್ತೆ ಮೈಸೂರುಕೇಂದ್ರ ಅಥವಾ ರಾಜ್ಯಗಳೇ ದಲ್ಲಾಳಿಗಳಾಗಿ ಜನಹಿತ ಬಯಸಲು ಸಾಧ್ಯವೇ? ನಮ್ಮನ್ನು ನಾವೇ ಆಳ್ವಿಕೆ ಮಾಡುತ್ತೇವೆ ಎಂಬ ವ್ಯವಸ್ಥೆಯಲ್ಲೂ ಅವು ಮಾರಾಟ ವ್ಯವಸ್ಥೆಯಾಗಿ ವಾಲಿದರೆ ಅಭಿವೃದ್ಧಿ ಅಸಾಧ್ಯ ಎಂದು ಮಾಜಿ ಸ್ಪೀಕರ್‌ ಕೆ.ಆರ್‌. ರಮೇಶ್‌ಕುಮಾರ್‌ ಕಳವಳ ವ್ಯಕ್ತಪಡಿಸಿದರು.ಮೈಸೂರು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ, ಸಾರ್ವಜನಿಕ ಆಡಳಿತ ಅಧ್ಯಯನ ವಿಭಾಗ, ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಆಶ್ರಯದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ 21ನೇ ಮಹಾ ಸಮ್ಮೇಳನ ಮತ್ತು ರಜತ ಮಹೋತ್ಸವದಲ್ಲಿ ಅವರು ಮಾತನಾಡಿದರು.ಹೊಸದಿಲ್ಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ವೆಲೆರಿಯನ್ ರೋಡ್ರಿಗಸ್ ಮಾತನಾಡಿದರು.ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ, ಕುಲಸಚಿವ ನವೀನ್ ಕುಮಾರ್, ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಎಂ.ಕೆ. ಸವಿತಾ, ಸಮ್ಮೇಳನ ಆಯೋಜನಾ ಸಮಿತಿ ಗೌರವಾಧ್ಯಕ್ಷ ಪ್ರೊ. ಕೃಷ್ಣ ಆರ್.ಹೊಂಬಳ್, ಅಧ್ಯಕ್ಷ ಪ್ರೊ. ಶಂಕರನಾರಾಯಣಪ್ಪ, ಸಂಘಟನಾ ಕಾರ್ಯದರ್ಶಿ ಪ್ರೊ.ಜೆ. ಸೋಮಶೇಖರ್ ಮೊದಲಾದವರು ಇದ್ದರು.