ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ಪಾಲಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿಎಸ್ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ್ ಅವಿರೊಧವಾಗಿ ಆಯ್ಕೆಯಾದರು.

ನಿಕಟ ಪೂರ್ವ ಅಧ್ಯಕ್ಷ ಬೈರವೇಶ್ವರ್ ಹಾಗೂ ಉಪಾಧ್ಯಕ್ಷ ನವೀನ್ ಪಿ.ಸಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಚುನಾವಣೆ ನಿಗದಿಯಾಗಿತ್ತು. ಸಂಘದ ಆವರಣದಲ್ಲಿ ಗಾಯಿತ್ರಿ ದೇವಿ ಪಿ.ಜಿ. ಅವರ ಸಭಾಧ್ಯಕ್ಷತೆಯಲ್ಲಿ ಈ ಚುನಾವಣೆ ನಡೆಯಿತು.

ಸಂಘದಲ್ಲಿ 12 ಮಂದಿ ನಿರ್ದೇಶಕರಲ್ಲಿ ಅಧ್ಯಕ್ಷಗಾದಿಗೆ ನಾಗರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜನಾರ್ಧನ್ ಮಾತ್ರ ಅರ್ಜಿ ಸಲ್ಲಿಸಿದ್ದ ಹಿನ್ನೆಲೆ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಸಂಘದ ಸಿಇಒ ಲಕ್ಷ್ಮಿಕಾಂತ್ ಅವರು ಅವಿರೋಧ ಎಂದು ಘೋಷಣೆ ಮಾಡಿದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ, ಪೈಮುಕುಂದ, ಪಿ.ಎಚ್ ಚಂಧ್ರಶೇಖರ್, ನಂದೀಶ್, ಕೆಆರ್‌ಎಸ್ ರಾಮೇಗೌಡ ಸೇರಿದಂತೆ ಸಂಘದ ನಿರ್ದೇಶಕರು, ಮುಖಂಡರು ಅಭಿನಂದಿಸಿದರು.


ನಾಳೆ ಸಾಯಿ ಸಂಗೀತೋತ್ಸವ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಮಧುರ ಮಂಡ್ಯ ರಂಗಕಲಾ ಟ್ರಸ್ಟ್ ಸಹಯೋಗದೊಂದಿಗೆ ಸಾಯಿ ಸಂಗೀತೋತ್ಸವ ಕಾರ್ಯಕ್ರಮವನ್ನು ಫೆ.೨೧ರಂದು ಸಂಜೆ.೪.೩೦ಕ್ಕೆ ನಗರದ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಎ.ವಿ.ಉಮೇಶ್ ತಿಳಿಸಿದರು.

ಶ್ರೀಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಮತ್ತು ಶ್ರೀಸತ್ಯ ಸಾಯಿ ಲೋಕ ಸೇವಾ ಗುರುಕುಲಂನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ಸಂಗೀತ ಮತ್ತು ಸ್ವರಮೇಳ ನಡೆಯಲಿದೆ ಎಂದರು.

ಕಾರ್ಯಕ್ರಮವನ್ನು ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಬಿ.ಸಿ.ಭಗವಾನ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಮಧುರ ಮಂಡ್ಯ ರಂಗಕಲಾ ಟ್ರಸ್ಟ್‌ನ ಅಧ್ಯಕ್ಷ ಡಾ.ಎ.ವಿ.ಉಮೇಶ್ ವಹಿಸುವರು. ಮಂಡ್ಯ ವೈದ್ಯಕೀಯ ವಿಜ್ಞಾನಗಳ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಸತ್ಯಸಾಯಿ ಲೋಕ ಸೇವಾ ಗುರುಕುಲಂನ ಹಿರಿಯ ವಿದ್ಯಾರ್ಥಿ, ತಾರಾ ಡಯಾಗ್ನೋಸ್ಟಿಕ್ ಸೆಂಟರ್‌ನ ರೋಗಶಾಸ್ತ್ರ ತಜ್ಞ ಡಾ.ಕೆ.ಚಂದ್ರಶೇಖರ್ ಪ್ರಾಸ್ತವಿಕ ನುಡಿಗಳನ್ನಾಡುವರು. ಗುರುಕುಲಂನ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವರು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಮಧುರ ಮಂಡ್ಯ ಕಲಾಟ್ರಸ್ಟ್‌ನ ಕಾರ್ಯದರ್ಶಿ ಚಿಕ್ಕಸಿದ್ದಯ್ಯ, ಖಜಾಂಚಿ ರಾಮಲಿಂಗೇಗೌಡ, ವೈದ್ಯ ಡಾ.ಕೆ.ಚಂದ್ರಶೇಖರ್, ಸರ್ಕಾರಿ ನೌಕರರ ಸಂಘದ ರಘು ಇದ್ದರು.