ಪಣಕನಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷರು-ಉಪಾಧ್ಯಕ್ಷರ ಅವಿರೋಧ ಆಯ್ಕೆ

| Published : Jul 06 2025, 11:49 PM IST

ಸಾರಾಂಶ

ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಸಹಕಾರ ಸಂಘದ ಎಲ್ಲ ನಿರ್ದೇಶಕರು, ಗ್ರಾಮದ ಮುಖಂಡರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಉಪಾಧ್ಯಕ್ಷರು, ಎಲ್ಲಾ ನಿರ್ದೇಶಕರ ಜೊತೆಗೂಡಿ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಪಣಕನಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ್, ಉಪಾಧ್ಯಕ್ಷರಾಗಿ ಲತಾ ಅವರು ಅವಿರೋಧವಾಗಿ ಆಯ್ಕೆಯಾದರು.

ಕಳೆದ ಜೂನ್ ತಿಂಗಳಲ್ಲಿ ನಡೆದ ಸಹಕಾರ ಸಂಘಕ್ಕೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ 11 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದರು. ಇಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ನಾಗರಾಜು, ಉಪಾಧ್ಯಕ್ಷ ಸ್ಥಾನಕ್ಕೆ ಲತಾ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಇಬ್ಬರ ಅವಿರೋಧ ಆಯ್ಕೆಯನ್ನು ಚುನಾವಣಾ ಅಧಿಕಾರಿ ಕೆ.ಬಿ. ಸುಮಿತ್ರ ಘೋಷಿಸಿದರು.

ನೂತನ ಅಧ್ಯಕ್ಷ ನಾಗರಾಜು ಮಾತನಾಡಿ, ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಸಹಕಾರ ಸಂಘದ ಎಲ್ಲ ನಿರ್ದೇಶಕರು, ಗ್ರಾಮದ ಮುಖಂಡರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಉಪಾಧ್ಯಕ್ಷರು, ಎಲ್ಲಾ ನಿರ್ದೇಶಕರ ಜೊತೆಗೂಡಿ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಜೆಡಿಎಸ್ ಮುಖಂಡ ಶಂಕರೇಗೌಡ ಪಣಕನಹಳ್ಳಿ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ನಾಲ್ಕು ಗ್ರಾಮಗಳ ಮುಖಂಡರ ಸಹಕಾರದಿಂದ ಮೈತ್ರಿ ಪಕ್ಷದ 11 ಜನ ನಿರ್ದೇಶಕರುಗಳು ಆಯ್ಕೆಯಾಗಿದ್ದರು. ಅಧ್ಯಕ್ಷರಾಗಿ ನಾಗರಾಜು, ಉಪಾಧ್ಯಕ್ಷರಾಗಿ ಲತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಶುಭ ಕೋರಿದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ನಿರ್ದೇಶಕರುಗಳಾದ ವರದೇಗೌಡ, ರಾಜು, ವೆಂಕಟರಾಮು, ರವಿ, ರೇವಣ್ಣ, ಪುಟ್ಟಮ್ಮ, ಸಿಂಗ್ರಯ್ಯ, ಬಸವರಾಜು, ಮುಖಂಡರುಗಳಾದ ಗ್ರಾ.ಪಂ ಸದಸ್ಯ ಲೋಕೇಶ್, ಉಮೇಶ್, ರೇವಣ್ಣ, ನಾಗೇಂದ್ರ, ರಮೇಶ್, ಶಿವರಾಮ್ ಇದ್ದರು.