ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ

| Published : Mar 26 2025, 01:33 AM IST

ಸಾರಾಂಶ

ಸಹಕಾರ ಸಂಘವು ೧೧ ಮಂದಿ ನಿರ್ದೇಶಕರ ಬಲ ಹೊಂದಿದ್ದು, ಕಳೆದ ತಿಂಗಳು ೫ ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ೧೧ ಮಂದಿ ನಿರ್ದೇಶಕರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದರು. ಹಿನ್ನೆಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಜೆ.ಬಿ.ರಾಮೇಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಯಲಕ್ಷ್ಮಮ್ಮ ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಈ ಇಬ್ಬರನ್ನೇ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತಾಲೂಕಿನ ಹಿರೀಸಾವೆ ಹೋಬಳಿಯ ಜಿನ್ನೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜೆ.ಬಿ.ರಾಮೇಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಯಲಕ್ಷ್ಮಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು.

ಸಹಕಾರ ಸಂಘವು ೧೧ ಮಂದಿ ನಿರ್ದೇಶಕರ ಬಲ ಹೊಂದಿದ್ದು, ಕಳೆದ ತಿಂಗಳು ೫ ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ೧೧ ಮಂದಿ ನಿರ್ದೇಶಕರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದರು. ಹಿನ್ನೆಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಜೆ.ಬಿ.ರಾಮೇಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಯಲಕ್ಷ್ಮಮ್ಮ ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಈ ಇಬ್ಬರನ್ನೇ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಗಣ್ಯರು, ಮುಖಂಡರು ಮತ್ತು ಸಂಘದ ವತಿಯಿಂದ ಅಭಿನಂದಿಸಲಾಯಿತು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಜಿ. ರಾಮಕೃಷ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜೆ.ಎಸ್.ಮಂಜುನಾಥ್, ಮುಖಂಡ ಜೆ.ಜೆ.ಧನಂಜಯ, ನಿರ್ದೇಶಕರಾದ ಜೆ.ಎನ್. ಆಂಜನ್, ಜೆ.ಎನ್.ಲೋಕೇಶ್, ಜೆ.ಎಸ್. ವಾಸುದೇವ, ಜೆ.ಕೆ.ನಾಗರಾಜೇಗೌಡ, ದೊಡ್ಡಗೌಡ, ಯಶವಂತ್, ರಾಜು, ಎಂ.ಎನ್.ಕೆಂಪೇಗೌಡ, ತಾಯಮ್ಮ, ಕಾರ್ಯ ನಿರ್ವಹಣಾಧಿಕಾರಿ ಜೆ.ಸಿ. ಮೋಹನ್ ಕುಮಾರ್, ಸಿಬ್ಬಂದಿ ಜೆ.ಕೆ.ರಾಕೇಶ್, ನಂಜೇಗೌಡ ಹಾಗೂ ಇತರರು ಇದ್ದರು.