ಬಿಜೆಪಿಗೆ ಬಾಂಗ್ಲಾದೇಶ, ಪಾಕಿಸ್ತಾನದ ಹೆಸರು ಹೇಳದಿದ್ದರೆ ನಿದ್ರೆ ಬರುವುದಿಲ್ಲ. ಮತದಾರರ ಪಟ್ಟಿಯಲ್ಲಿ ವಲಸೆ ಬಂದವರ ಹೆಸರಿದೆ ಎಂದು ಹೇಳುವ ಬಿಜೆಪಿಗೆ ಅಷ್ಟು ಧೈರ್ಯವಿದ್ದರೆ ಮತದಾರರ ಪಟ್ಟಿಯಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ವಲಸೆ ಬಂದವರ ಹೆಸರುಗಳನ್ನು ತೋರಿಸಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಸವಾಲು ಹಾಕಿದ್ದಾರೆ.

ಉಡುಪಿ : ಬಿಜೆಪಿಗೆ ಬಾಂಗ್ಲಾದೇಶ, ಪಾಕಿಸ್ತಾನದ ಹೆಸರು ಹೇಳದಿದ್ದರೆ ನಿದ್ರೆ ಬರುವುದಿಲ್ಲ. ಮತದಾರರ ಪಟ್ಟಿಯಲ್ಲಿ ವಲಸೆ ಬಂದವರ ಹೆಸರಿದೆ ಎಂದು ಹೇಳುವ ಬಿಜೆಪಿಗೆ ಅಷ್ಟು ಧೈರ್ಯವಿದ್ದರೆ ಮತದಾರರ ಪಟ್ಟಿಯಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ವಲಸೆ ಬಂದವರ ಹೆಸರುಗಳನ್ನು ತೋರಿಸಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಸವಾಲು ಹಾಕಿದ್ದಾರೆ.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಚುನಾವಣಾ ಆಯೋಗವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿಯೇ ಎಸ್‌ಐಆರ್‌ ಹೆಸರಿನಲ್ಲಿ ನಿಜವಾದ ಮತದಾರರ ಮತಗಳನ್ನು ಚೋರಿ ಮಾಡುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಅಬ್ದುಲ್ ರವೂಫ್, ಶಾಲೇಟ್ ಪಿಂಟೋ, ರಾಜು ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಶಾಂತ್ ಜತ್ತನ್ನ, ಭಾಸ್ಕರ್ ರಾವ್ ಕಿದಿಯೂರು, ಬಿ. ನರಸಿಂಹಮೂರ್ತಿ ಹಾಗೂ ಜ್ಯೋತಿ ಹೆಬ್ಬಾರ್ ಇದ್ದರು.