ಅವೈಜ್ಞಾನಿಕ ಪೈಪ್‌ಲೈನ್ ಕಾಮಗಾರಿ ತಾತ್ಕಾಲಿಕ ಸ್ಥಗಿತ

| Published : Aug 03 2024, 12:33 AM IST

ಅವೈಜ್ಞಾನಿಕ ಪೈಪ್‌ಲೈನ್ ಕಾಮಗಾರಿ ತಾತ್ಕಾಲಿಕ ಸ್ಥಗಿತ
Share this Article
  • FB
  • TW
  • Linkdin
  • Email

ಸಾರಾಂಶ

ಕಿನ್ನಿಗೋಳಿ ತುಡಾಮ ದಾಮಸ್ ಕಟ್ಟೆ ರಸ್ತೆಯು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕೆಟ್ಟು ಹೋಗಿದ್ದು, ತೀವ್ರ ಇಕ್ಕಟ್ಟಾಗಿರುವ ರಸ್ತೆ ಬದಿಯಲ್ಲಿ ಕಾಮಗಾರಿಗೆ ಹೊಂಡ ತೋಡಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ.

ಕನ್ನಡಪ್ರಭ ವಾರ್ತೆ ಮೂಲ್ಕಿ

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವತಿಯಿಂದ ಕಿನ್ನಿಗೋಳಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಿಂದ ಕವಲೊಡೆಯುವ ತುಡಾಮ ರಸ್ತೆಯಲ್ಲಿ ಮಳೆಗಾಲದಲ್ಲಿ ಅವೈಜ್ಞಾನಿಕವಾಗಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದೆ. ಸ್ಥಳೀಯ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ತಾತ್ಕಾಲಿಕ ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ. ಕಳೆದ ಫೆಬ್ರವರಿಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವತಿಯಿಂದ ಸುಮಾರು 9 ಲಕ್ಷ ವೆಚ್ಚದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಹಣ ಮಂಜೂರಾಗಿತ್ತು. ಆದರೆ ಪಟ್ಟಣ ಪಂಚಾಯಿತಿ ಮಳೆಗಾಲದಲ್ಲಿ ರಸ್ತೆ ಅಗೆಯುವ ಮೂಲಕ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿದೆ.

ಕಿನ್ನಿಗೋಳಿ ತುಡಾಮ ದಾಮಸ್ ಕಟ್ಟೆ ರಸ್ತೆಯು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕೆಟ್ಟು ಹೋಗಿದ್ದು, ತೀವ್ರ ಇಕ್ಕಟ್ಟಾಗಿರುವ ರಸ್ತೆ ಬದಿಯಲ್ಲಿ ಕಾಮಗಾರಿಗೆ ಹೊಂಡ ತೋಡಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ.

ಸ್ಥಳೀಯರಾದ ಸ್ಟ್ಯಾನಿ ಪಿಂಟೋ ಮಾತನಾಡಿ ಮಳೆಗಾಲದಲ್ಲಿ ಅವೈಜ್ಞಾನಿಕ ,ಅಪಾಯಕಾರಿ ಕಾಮಗಾರಿ ನಡೆಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.