ಅವೈಜ್ಞಾನಿಕ ಕಾಮಗಾರಿ: ರೈತರ ಜಮೀನಿನಲ್ಲಿ ಹರಿಯುತ್ತಿರುವ ನೀರು

| Published : Aug 26 2024, 01:42 AM IST

ಅವೈಜ್ಞಾನಿಕ ಕಾಮಗಾರಿ: ರೈತರ ಜಮೀನಿನಲ್ಲಿ ಹರಿಯುತ್ತಿರುವ ನೀರು
Share this Article
  • FB
  • TW
  • Linkdin
  • Email

ಸಾರಾಂಶ

ಕೂಡಲೇ ಕೆಶಿಪ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು. ಜೊತೆಗೆ ಹೇಮಾವತಿ ನೀರಾವರಿ ಇಲಾಖೆಯ ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ಮಾಡಿ ಹಳ್ಳದ ಒತ್ತುವರಿ ತೆರವು ಮಾಡಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ಅಗ್ರಹಾರಬಾಚಹಳ್ಳಿ ಕೆರೆಯು ಮಳೆ ನೀರಿನಿಂದ ಉಕ್ಕಿ ಹರಿಯುತ್ತಿದೆ. ಕೆಶಿಪ್‌ನವರ ಅವೈಜ್ಞಾನಿಕ ಕಾಮಗಾರಿಯಿಂದ ಕೆರೆಕೋಡಿಯ ನೀರು ರೈತರ ಜಮೀನಲ್ಲಿಯೇ ಹರಿಯುತ್ತಿದೆ.

ಬೆಂಗಳೂರು-ಜಲಸೂರು ರಾಜ್ಯ ಹೆದ್ದಾರಿ ಕಾಮಗಾರಿ ಕೆಶಿಪ್ ನಡೆಸುತ್ತಿದೆ. ಆದರೆ, ಹಳ್ಳದ ನೀರು ಸುಲಲಿತವಾಗಿ ಹರಿದು ಹೋಗಲು ಅಗತ್ಯ ಕ್ರಮ ವಹಿಸಿಲ್ಲ. ಇದರಿಂದ ರೈತರ ನೂರಾರು ಎಕರೆ ಜಮೀನು ನೀರಿನಿಂದ ಕೊಚ್ಚಿ ಹೋಗಿದೆ.

ನಾಟಿ ಮಾಡಿದ ಭತ್ತವು ಸಹ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರಿಗೆ ಲಕ್ಷಾಂತರ ರು. ನಷ್ಟವಾಗಿದೆ. ಈ ಭಾಗದಲ್ಲಿ ಈಗ ಮಳೆಯಾಗುತ್ತಿರುವುದರಿಂದ ಕೆರೆ ತುಂಬಿ ಕೋಡಿ ಬಿದ್ದಿದೆ. ಕೋಡಿ ನೀರು ಪ್ರವಾಹದಂತೆ ಉಕ್ಕಿ ಹರಿಯುತ್ತಿರುವುದರಿಂದ ನಾಟಿ ಮಾಡಲು ಸಹ ತೊಂದರೆಯಾಗಿದೆ.

ಕೂಡಲೇ ಕೆಶಿಪ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು. ಜೊತೆಗೆ ಹೇಮಾವತಿ ನೀರಾವರಿ ಇಲಾಖೆಯ ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ಮಾಡಿ ಹಳ್ಳದ ಒತ್ತುವರಿ ತೆರವು ಮಾಡಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.28 ರಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಮಂಡ್ಯ: ನಗರಸಭೆ ಸಭಾಂಗಣದಲ್ಲಿ ಆಗಸ್ಟ್ 28 ರಂದು ಮಧ್ಯಾಹ್ನ 12 ಗಂಟೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ನಗರಸಭೆ ಚುನಾಯಿತ ಸದಸ್ಯರು ಸಭೆಯು ಪ್ರಾರಂಭವಾದ ಕೂಡಲೇ ಬೆಳಗ್ಗೆ 9 ರಿಂದ 10 ಗಂಟೆವರೆಗೆ ನಗರಸಭೆ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಸಲ್ಲಿಸಬೇಕು. ಅಧ್ಯಕ್ಷ ಅಥವಾ ಉಪಾಧ್ಯಕ್ಷರ ಸ್ಥಾನಕ್ಕೆ ಒಬ್ಬ ಅಭ್ಯರ್ಥಿ ಮಾತ್ರ ಸೂಚಿಸಬೇಕು. ನಾಮಪತ್ರಗಳ ಪರಿಶೀಲನೆ ನಡೆಸಿ ಅರ್ಹ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಿದ ನಂತರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಸಲಾಗುವುದು. ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗ (ಪ್ರವರ್ಗ-ಎ) ಗಳಿಗೆ ಮೀಸಲಿಡಲಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.