ಸಾರಾಂಶ
ಹೊಸಕೋಟೆ: ಬಾಬಾ ಸಹೇಬ್ ಅಂಬೇಡ್ಕರ್ ರಚಿತ ಸಂವಿಧಾನದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಹೊಸಕೋಟೆ: ಬಾಬಾ ಸಹೇಬ್ ಅಂಬೇಡ್ಕರ್ ರಚಿತ ಸಂವಿಧಾನದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಸ್ಥಾಪಿಸಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಅವರು, ಮಕ್ಕಳು ತಮ್ಮ ಜೀವನದಲ್ಲಿ ಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಬೇಕು. ಪ್ರತಿ ದಿನ ನಿಮ್ಮ ಗುರಿ ಸಾಧನೆಗೆ ಸಂಬಂಧಪಟ್ಟ ಪುಸ್ತಕದ ಒಂದು ಪುಟವನ್ನಾದರೂ ಓದಬೇಕು ಎಂದು ಸಲಹೆ ಮಾಡಿದರು.ನಗರದಲ್ಲಿನ ಅಂಬೇಡ್ಕರ್ ಭವನ ಹಾಗೂ ಪುತ್ಥಳಿ ನಿರ್ಮಾಣಕ್ಕೆ ಮಾಜಿ ಸಂಸದರ ಆಡಳಿತಾವಧಿಯಲ್ಲಿ ಭೂಮಿ ಮಂಜೂರು ಮಾಡಿ ಅನುದಾನ ಬಿಡುಗಡೆ ಮಾಡಿದ್ದರು. ನನ್ನ ಅವಧಿಯಲ್ಲಿ ಪುತ್ಥಳಿ ಅನಾವರಣಗೊಳಿಸಿದ ಹೆಮ್ಮೆ ಇದೆ ಎಂದರು.ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಹಸೀಲಾರ್ ಸೋಮಶೇಖರ್, ಇಒ ಡಾ. ನಾರಾಯಣಸ್ವಾಮಿ, ನಗರಸಭಾಧ್ಯಕ್ಷೆ ಆಶಾ ರಾಜಶೇಖರ್, ಬಿಇಒ ಪದ್ಮನಾಭ್, ಪೊಲೀಸ್ ನಿರೀಕ್ಷಕ ಅಶೋಕ್, ಕೆಪಿಸಿಸಿ ಯುವ ಘಟಕದ ಜಿಲ್ಲಾಧ್ಯಕ್ಷ ಗುಟ್ಟಳ್ಳಿ ನಾಗರಾಜ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೇಶವ್ ಮೂರ್ತಿ, ನಿರ್ದೇಶಕ ಡಾ.ಎಚ್.ಎಂ.ಸುಬ್ಬರಾಜ್, ಮುಖಂಡರಾದ ಬಿ.ವಿ.ಬೈರೇಗೌಡ, ವಿ.ವಿಜಯ್ ಕುಮಾರ್, ಡಿಎಂ ಮುನಿರಾಜ್ ಇತರರು ಭಾಗವಹಿಸಿದ್ದರು.ಫೋಟೋ: 25 ಹೆಚ್‌ಎಸ್‌ಕೆ 4 ಮತ್ತು 5
(ಅನಾವರಣ ಫೋಟೋ ಸಣ್ಣದಾಗಿ ಸುದ್ದಿ ಜೊತೆ ಇರಲಿ)4. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಅನಾವರಣ.
(ಪ್ಯಾನಲ್‌ನಲ್ಲಿ ಬಳಸಿ)5: ಹೊಸಕೋಟೆಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡಿ ಸಮಾಜದ ವಿವಿಧ ರಂಗದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಶಾಸಕ ಶರತ್ ಬಚ್ಚೇಗೌಡ ಸನ್ಮಾನಿಸಿದರು.