ಜುಲೈ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ: ನಿವೃತ್ತ ಮುಖ್ಯ ಶಿಕ್ಷಕ ಮರಿಮಾದಯ್ಯ

| Published : Jul 09 2024, 12:48 AM IST

ಜುಲೈ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ: ನಿವೃತ್ತ ಮುಖ್ಯ ಶಿಕ್ಷಕ ಮರಿಮಾದಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮಳವಳ್ಳಿ ತಾಲೂಕಿನ ಕಿರಗಸೂರು ಗ್ರಾಮದಲ್ಲಿ ಜುಲೈ 14 ರಂದು ನೂತನವಾಗಿ ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಟಿ.ನರಸೀಪುರ ಭಂತೆ ಬೋದಿರತ್ನ ದಿವ್ಯ ಸಾನಿಧ್ಯದಲ್ಲಿ ಉರಿಲಿಂಗಿಪೆದ್ದಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕಿನ ಕಿರಗಸೂರು ಗ್ರಾಮದಲ್ಲಿ ಜುಲೈ 14 ರಂದು ನೂತನವಾಗಿ ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ನಿವೃತ್ತ ಮುಖ್ಯ ಶಿಕ್ಷಕ ಮರಿಮಾದಯ್ಯ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗ್ರಾಮಸ್ಥರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿ, ಟಿ.ನರಸೀಪುರ ಭಂತೆ ಬೋದಿರತ್ನ ದಿವ್ಯ ಸಾನಿಧ್ಯದಲ್ಲಿ ಉರಿಲಿಂಗಿಪೆದ್ದಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಲಿದ್ದಾರೆ ಎಂದರು.

ನಂತರ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ನಂಜುಂಡಸ್ವಾಮಿ ಉದ್ಘಾಟಿಸುವರು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಅಕ್ಕ ಆಕಾಡೆಮಿ ಮುಖ್ಯಸ್ಥ ಡಾ.ಶಿವಕುಮಾರ್, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸ, ಬೆಂಗಳೂರು ಕೃಷಿಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಕೆ.ಸಿ.ದೊರೆಸ್ವಾಮಿ, ಭಾರತೀಯ ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷ ದರ್ಶನ್ ಸೋಮಶೇಖರ್, ಚಲನಚಿತ್ರ ನಟ ಸಂದೇಶ್, ಆರಕ್ಷಕ ವೃತ್ತ ನಿರೀಕ್ಷಕ ಬಿ.ಎಸ್ ಶ್ರೀಧರ್, ಬೆಳಕವಾಡಿ ಪೊಲೀಸ್ ಸಬ್‌ಇನ್ಸ್ ಪೆಕ್ಟರ್ ವಿ.ಸಿ.ಆಶೋಕ್, ಗ್ರಾಪಂ ಅಧ್ಯಕ್ಷೆ ಮಹಾಲಕ್ಷ್ಮಿ ಗುರುಮೂರ್ತಿ, ಸದಸ್ಯ ರಾಜೇಂದ್ರ ಪ್ರಸಾದ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನಾ ಬೆಳಗ್ಗೆ 9 ಗಂಟೆಗೆ ಬೆಳಕವಾಡಿ ಸರ್ಕಲ್‌ನಿಂದ ಗ್ರಾಮದವರೆಗೆ ಜಾನಪದ ಕಲಾ ಮೇಳದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಎಂ.ಎನ್.ಜಯರಾಜು, ಕುಮಾರಸ್ವಾಮಿ, ಮಾರ್ಕಾಲು ನಟರಾಜು, ರಘುರಾಜ್, ಮಹದೇವಯ್ಯ, ವಿಷಕಂಠ, ಮಹದೇವಸ್ವಾಮಿ, ನಾಗಮಾಧು, ನಂಜುಂಡಸ್ವಾಮಿ, ಶೇಖರ್ ಸಾವುಕಯ್ಯ ಇತರರು ಇದ್ದರು.

ಜು.೧೦ರಂದು ಜಿ.ಮಾದೇಗೌಡ ಪ್ರಶಸ್ತಿ ಪ್ರದಾನ

ಮಂಡ್ಯ: ಡಾ.ಜಿ.ಮಾದೇಗೌಡ ಪ್ರತಿಷ್ಠಾನ, ಭಾರತೀ ಎಜುಕೇಷನ್ ಟ್ರಸ್ಟ್‌ನಿಂದ ಜು.೧೦ರಂದು ಸಂಜೆ ೪ ಗಂಟೆಗೆ ನಗರದ ರೈತ ಸಭಾಂಗಣದಲ್ಲಿ ೨೪ನೇ ವರ್ಷದ ರಾಜ್ಯ ಮಟ್ಟದ ಡಾ.ಜಿ.ಮಾದೇಗೌಡ ಸಮಾಜ ಸೇವಾ ಮತ್ತು ಸಾವಯವ ಕೃಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ನಂಜೇಗೌಡ ತಿಳಿಸಿದರು.ಮಾಜಿ ಸಂಸದ ಡಾ.ಸಿ.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಧ್ಯಾಪಕ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು. ಶಾಸಕ ಪಿ.ರವಿಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೆ.ಎಚ್.ಪಾಟೀಲ್ ಪ್ರತಿಷ್ಠಾನದ ಅಧ್ಯಕ್ಷ ಡಿ.ಆರ್.ಪಾಟೀಲ್ ಅವರಿಗೆ ಸಮಾಜ ಸೇವಾ ಪ್ರಶಸ್ತಿ ಹಾಗೂ ಮಳವಳ್ಳಿ ತಾಲೂಕು ಮಲ್ಲಿಗಹಳ್ಳಿಯ ಸಾವಯವ ಕೃಷಿಕ ಶ್ರೀಪಾದ ಪಿ.ಆಚಾರ್ಯ ಅವರಿಗೆ ಸಾವಯವ ಕೃಷಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಹಾಗೂ ಪ್ರತಿಷ್ಠಾನದ ಅಧ್ಯಕ್ಷರು, ಪದಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸುವರು ಎಂದರು.ಪ್ರತಿಷ್ಠಾನದ ನಾಗೇಶ, ಮಹದೇವಸ್ವಾಮಿ, ಕೃಷ್ಣ, ರಾಮಕೃಷ್ಣ ಅವರು ಗೋಷ್ಠಿಯಲ್ಲಿದ್ದರು.