ಪಂಡಿತ್ ರಂಗಮಂದಿರದಲ್ಲಿ ಹಲ್ಮಿಡಿ ಶಾಸನ ಪ್ರತಿಕೃತಿ ಅನಾವರಣ

| Published : Nov 02 2024, 01:32 AM IST

ಸಾರಾಂಶ

ಮೈಸೂರು ರಾಜ್ಯವನ್ನು 1973ರಲ್ಲಿ ಕರ್ನಾಟಕ ಎಂದು ನಾಮಕರಣಗೊಂಡು ಇದೀಗ 50 ವರ್ಷ ಪೂರ್ಣಗೊಂಡಿದ್ದು, ಕರ್ನಾಟಕ ಸುವರ್ಣ ಸಂಭ್ರಮ-50ರ ಸವಿನೆನಪಿನಲ್ಲಿ ಶುಕ್ರವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರ ಅವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅನಾವರಣಗೊಳಿಸುವರು.

ಕನ್ನಡಪ್ರಭ ವಾರ್ತೆ ಕಲಬುರಗಿಮೈಸೂರು ರಾಜ್ಯವನ್ನು 1973ರಲ್ಲಿ ಕರ್ನಾಟಕ ಎಂದು ನಾಮಕರಣಗೊಂಡು ಇದೀಗ 50 ವರ್ಷ ಪೂರ್ಣಗೊಂಡಿದ್ದು, ಕರ್ನಾಟಕ ಸುವರ್ಣ ಸಂಭ್ರಮ-50ರ ಸವಿನೆನಪಿನಲ್ಲಿ ಶುಕ್ರವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರ ಅವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅನಾವರಣಗೊಳಿಸುವರು.ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನವಾಗಿದೆ. ಇದು 1936 ರಲ್ಲಿ ಹಾಸನ ಜಿಲ್ಲೆ ಹಲ್ಮಿಡಿ ಎಂಬ ಸ್ಥಳದಲ್ಲಿ ಡಾ. ಎಂ.ಎಚ್. ಕೃಷ್ಣ ಎಂಬುವವರು ಸಂಶೋಧಿಸಿದ್ದರು. ಇದು ಹದಿನಾರು ಸಾಲುಗಳನ್ನು ಹೊಂದಿದ್ದು, ಮರಳ ಶಿಲ್ಪದ ಮೇಲೆ ಕೆತ್ತಲ್ಪಟ್ಟಿದೆ. ಇದು ಹಳಗನ್ನಡ ಹಾಗೂ ದಾಕ್ಷಾಣಾತ್ಯ ಬ್ರಾಹ್ಮಿ ಲಿಪಿಗಳನ್ನು ಹೋಲುವಂತಹ ಕನ್ನಡ ಲಿಪಿಯಲ್ಲಿದೆ.

ಕದಂಬ ವಂಶದ ಕಾಕುಸ್ಥವರ್ಮ ಬರೆಸಿದ ದತ್ತಿಶಾಸನ ಇದಾಗಿದೆ. ಶತೃರಾಜರ ಮೇಲೆ ಹೋರಾಡಿ ಗೆದ್ದ ವಿಜ ರಸ ಎಂಬ ಯೋಧನಿಗೆ, ಪಲ್ಮಿಡಿ ಮತ್ತು ಮೂಳಿವಳ್ಳಿಯನ್ನು ದತ್ತಿಯಾಗಿ ಬಿಟ್ಟ ರಾಜಾಜ್ಞೆಯನ್ನು ಈ ಶಾಸನ ನಿರೂಪಿಸುತ್ತದೆ. ಹಲ್ಮಿಡಿ ಶಾಸನ ಸಂಸ್ಕೃತ ಪ್ರಭಾವಕ್ಕೆ ಒಳಗಾಗಿದ್ದರೂ, ಆ ಕಾಲದಲ್ಲಿ ಬಳಕೆಯಲ್ಲಿದ್ದ ಪ್ರೌಢ ಕನ್ನಡವನ್ನು ನಿರೂಪಿಸುತ್ತದೆ.

ಈ ಸಂದರ್ಭದಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕ ಅಲ್ಲಮಪ್ರಭು ಪಾಟೀಲ, ಎಂಎಲ್‌ಸಿಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕಲಬುರಗಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ. ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಇದ್ದರು.