ಸಾರಾಂಶ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಒ ಕಚೇರಿ ಬಳಿ ‘ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ’ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಒ ಕಚೇರಿ ಬಳಿ ‘ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ’ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು.ನಂತರ ಮಾತನಾಡಿದ ಶಾಸಕರು, ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ ರಸ್ತೆ ಕರೆಯಲ್ಪಡುವುದು ಹರ್ಷ ತಂದಿದೆ ಎಂದರು.ಎಬಿ ಶೆಟ್ಟಿ ವೃತ್ತದಿಂದ, ಮಂಕಿಸ್ಟ್ಯಾಂಡ್ ಮುಖಾಂತರ ಮಂಗಳಾದೇವಿ ದೇವಸ್ಥಾನ, ಶಮಿ ಕಟ್ಟೆಯಾಗಿ ಫಸ್ಟ್ ರೈಲ್ವೆ ಬ್ರಿಡ್ಜ್‌ವರೆಗಿನ ರಸ್ತೆ ಇದಾಗಿದ್ದು ‘ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ’ ಎಂದು ನಾಮಕರಣವಾಗಿದೆ.
ಸಂಸದ ಕ್ಯಾ. ಬ್ರಿಜೇಶ್ ಚೌಟ, ರಮೇಶ್ ಕಂಡೆಟ್ಟು, ಮಾಜಿ ಮೇಯರ್‌ಗಳಾದ ಮನೋಜ್ ಕುಮಾರ್ ಕೋಡಿಕಲ್, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಮಾಜಿ ಉಪ ಮೇಯರ್ ಭಾನುಮತಿ, ಶೈಲೇಶ್ ಶೆಟ್ಟಿ, ಭರತ್ ಕುಮಾರ್, ಲತೀಫ್ ಕಂದುಕ, ರೇವತಿ ಶ್ಯಾಮ್ ಸುಂದರ್ ಶೆಟ್ಟಿ, ನಿತಿನ್ ಕುಮಾರ್, ಭಾಸ್ಕರ ಚಂದ್ರ ಶೆಟ್ಟಿ ಮತ್ತಿತರರು ಇದ್ದರು.