ಸಾರಾಂಶ
ದೀನ್ ದಯಾಳ್ ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿಗೆ ಭಾಜನರಾದ ಉಡುಪಿಯ ನಿವೃತ್ತ ಉಪನ್ಯಾಸಕ ಲಕ್ಷ್ಮೀಜನಾರ್ದನ ಭಟ್ ಇವರಿಗೆ ಮಣಿಪಾಲ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಮಾಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯಡ್ಕ, ರಾಮನಗರದ ಡಿ.ಡಿ. ಉಪಾಧ್ಯಾಯ ಮದ್ಯವರ್ಜನ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಕೇಂದ್ರ ಹಾಗೂ ಶಾಲಾ ಸಾಕ್ಷರತಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಜಾಗೃತಿ ಆಂದೋಲನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ದೀನ್ ದಯಾಳ್ ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗೆ ಹಿರಿಯಡ್ಕದ ವೀರಭದ್ರ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ನಡೆಯಿತು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಉಡುಪಿಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ವಹಿಸಿದ್ದರು.ಮಕ್ಕಳ ರಕ್ಷಣೆ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್. ಮಾಹಿತಿ ನೀಡಿದರು. ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ದೀನ್ ದಯಾಳ್ ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿಗೆ ಭಾಜನರಾದ ಉಡುಪಿಯ ನಿವೃತ್ತ ಉಪನ್ಯಾಸಕ ಲಕ್ಷ್ಮೀಜನಾರ್ದನ ಭಟ್ ಇವರಿಗೆ ಮಣಿಪಾಲ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಮಾಡಿದರು.ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಗಣಪತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಉಡುಪಿ ಬಿಇಒ ಡಾ. ಯಲ್ಲಮ್ಮ, ಡಿ.ಡಿ. ಉಪಾಧ್ಯಾಯ ಆರೋಗ್ಯ ಕೇಂದ್ರದ ಕಾರ್ಯದರ್ಶಿ ಡಿ. ಸುಜಾತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.