ಸಾರಾಂಶ
ಮೊಳಕಾಲ್ಮುರು: ವಿಶ್ವದಲ್ಲಿಯೇ ವಿಶಿಷ್ಟ ಸ್ಥಾನ ಪಡೆದಿರುವ ಕನ್ನಡ ಭಾಷಾ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವ ಜತೆಗೆ ಕನ್ನಡದ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತದಿಂದ ಶನಿವಾರ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪ್ರಾಚೀನ ಸ್ಥಾನ ಹೊಂದಿರುವ ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕನ್ನಡ ಭಾಷಾ ಶ್ರೀಮಂತಿಕೆ ಹೊರ ದೇಶದಲ್ಲಿಯೂ ಪಸರಿಸಿದೆ. ನಾಡು, ನುಡಿಯ ಕುರಿತು ಪ್ರತಿಯೊಬ್ಬರಿಗೂ ಅಭಿಮಾನ ಬೆಳೆಸಿಕೊಳ್ಳಬೇಕು. ಎಲ್ಲೇ ಇದ್ದರೂ ಕನ್ನಡದಲ್ಲಿಯೇ ಮಾತನಾಡುವ ಮೂಲಕ ಕನ್ನಡ ಭಾಷೆವನ್ನು ಉಳಿಸಿ ಬೆಳೆಸಬೇಕು ಎಂದು ಕರೆ ನೀಡಿದರು.ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು ಒಂದು ಗೂಡಿಸುವಲ್ಲಿ ಅನೇಕ ಮಹನೀಯರ ತ್ಯಾಗ, ಬಲಿದಾನ ಇದೆ. ಪ್ರತಿಯೊಬ್ಬರೂ ಕನ್ನಡ ಸಾಹಿತ್ಯವನ್ನು ಅರಿತುಕೊಳ್ಳಬೇಕು. ಮನೆಗಳಲ್ಲಿಯೇ ಇರಲಿ, ಹೊರಗಡೆಯೇ ಇರಲಿ ಕನ್ನಡಲ್ಲಿಯೇ ಮಾತನಾಡಿ ಭಾಷೆಯನ್ನು ಮುಂದಿನ ತಲೆಮಾರಿಗೂ ಜೀವಂತವಾಗಿರಿಸುವ ಕೆಲಸ ಮಾಡುವುದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿಯಾಗಿದೆ ಎಂದರು.
ತಹಸೀಲ್ದಾರ್ ಜಗದೀಶ್ ಮಾತನಾಡಿದರು.ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ದೇಶ ಭಕ್ತಿ ಪ್ರತಿಬಿಂಬಿಸುವಂತ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆಯಿತು.ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಮುಖ್ಯಾಧಿಕಾರಿ ಲಿಂಗರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾದೇವಿ, ಸಿಪಿಐ ನಾಗರಾಜ, ಪಪಂ ಸದಸ್ಯ ಅಬ್ದುಲ್ಲಾ, ಖಾದರ್, ಶುಭ ಪೃಥ್ವಿರಾಜ್, ಸಿಡಿಪಿಒ ನವೀನ್, ಎಇಇ ಲಿಂಗರಾಜ, ಲೋಕೋಪಯೋಗಿ ಎಇಇ ಲಕ್ಷ್ಮೀ ನಾರಾಯಣ, ಪಶು ಇಲಾಖೆಯ ಎಡಿ ಡಾ.ರಂಗಪ್ಪ ಇದ್ದರು.)
)
;Resize=(128,128))
;Resize=(128,128))