ಸಾರಾಂಶ
ಜಮಖಂಡಿ: ನಗರದ ದೇಸಾಯಿ ವೃತ್ತದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್, ಜಮಖಂಡಿ ಶಹರ ಪೊಲೀಸ್ ಠಾಣೆ ಆಶ್ರಯದಲ್ಲಿ ಸೋಮವಾರ ಮಾದಕ ವ್ಯಸನ ಮುಕ್ತ ಬಾಗಲಕೋಟೆ ಜಿಲ್ಲೆ ಜನಜಾಗೃತಿ ಜಾಥಾಗೆ ಚಾಲನೆ ನೀಡಲಾಯಿತು. ರಾಷ್ಟ್ರದ ಭವಿಷ್ಯ ರೂಪಿಸಬೇಕಾದ ಯುವಜನಾಂಗ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದಕರ ಸಂಗತಿ. ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ದೇಶದ ಉನ್ನತಿ ಸಾಧ್ಯ ಎಂದು ಡಿಎಸ್‌ಪಿ ಶಾಂತವೀರ ಈ. ಹೇಳಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ರಾಷ್ಟ್ರದ ಭವಿಷ್ಯ ರೂಪಿಸಬೇಕಾದ ಯುವಜನಾಂಗ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದಕರ ಸಂಗತಿ. ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ದೇಶದ ಉನ್ನತಿ ಸಾಧ್ಯ ಎಂದು ಡಿಎಸ್‌ಪಿ ಶಾಂತವೀರ ಈ. ಹೇಳಿದರು.ನಗರದ ದೇಸಾಯಿ ವೃತ್ತದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್, ಜಮಖಂಡಿ ಶಹರ ಪೊಲೀಸ್ ಠಾಣೆ ಆಶ್ರಯದಲ್ಲಿ ಸೋಮವಾರ ನಡೆದ ಮಾದಕ ವ್ಯಸನ ಮುಕ್ತ ಬಾಗಲಕೋಟೆ ಜಿಲ್ಲೆ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ವ್ಯಸನಗಳಿಗೆ ಬಲಿಯಾದವರು ಶಾರೀರಿಕ, ಮಾನಸಿಕ, ನಿಯಂತ್ರಣ ಕಳೆದುಕೊಂಡು ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ನೋವಿನ ಸಂಗತಿ. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಜನಾಂಗ ಮುಂದಾಗಬೇಕು, ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಬೇಕು. ಮಾದಕ ವಸ್ತುಗಳ ಮೋಡಿಗೆ ಬಲಿಯಾಗದಂತೆ ಎಚ್ಚರ ವಹಿಸುವ ಉದ್ದೇಶದಿಂದ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.ದೇಸಾಯಿ ವೃತ್ತದಿಂದ ಆರಂಭವಾದ ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಜಾಥಾದಲ್ಲಿ ವಿವಿಧ ಶಾಲಾ ಕಾಲೇಜು ವಿಧ್ಯಾರ್ಥಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮಾಜಿ ಯೋಧರು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.