ಯುಪಿಎಂಸಿ: ವೃತ್ತಿಪರ ಶಿಕ್ಷಣದ ಮಾಹಿತಿ ಕಾರ್ಯಾಗಾರ

| Published : Nov 28 2024, 12:34 AM IST

ಯುಪಿಎಂಸಿ: ವೃತ್ತಿಪರ ಶಿಕ್ಷಣದ ಮಾಹಿತಿ ಕಾರ್ಯಾಗಾರ
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನ.೨೬ರಂದು ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಅಂತಿಮ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಕುರಿತಾಗಿ ಮಾಹಿತಿ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನ.೨೬ರಂದು ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಅಂತಿಮ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಕುರಿತಾಗಿ ಮಾಹಿತಿ ಕಾರ್ಯಾಗಾರ ನಡೆಯಿತು.ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್‌ನ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ರಮೇಶ್ ಕೆ.ಜಿ. ಮತ್ತು ಪ್ರೊ. ಪದ್ಮನಾಭ ಪಿ. ಅವರು ಆಗಮಿಸಿದ್ದು, ವಿದ್ಯಾರ್ಥಿಗಳಿಗೆ ಪಿಜಿ ಸಿಇಟಿ, ಸಾಮಾನ್ಯ ಪ್ರವೇಶ ಪರೀಕ್ಷೆ, ಬ್ಯಾಂಕಿಂಗ್ ಪರೀಕ್ಷೆ, ಉದ್ಯೋಗ ಸಂದರ್ಶನ ಎದುರಿಸುವ ಬಗ್ಗೆ ವಿವರವಾದ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಭಾರತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ ನಿರ್ದೇಶಕ ಗಿರೀಶ್ ಅವರು ಉಪಸ್ಥಿತರಿದ್ದರು.ಕಾಲೇಜಿನ ಪ್ರಾಚಾರ್ಯರಾದ ಆಶಾ ಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಅತ್ಯುಪಯುಕ್ತವಾಗಿದ್ದ ಈ ಕಾರ್ಯಾಗಾರದ ಸಂಪೂರ್ಣವನ್ನು ಪ್ರಯೋಜನ ಪಡೆಯುವಂತೆ ಸಲಹೆ ಮಾಡಿದರು.

ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಸಂಚಾಲಕ ಹರಿಕೇಶವ್ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.