ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಆಶ್ರಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಮತ್ತು ಕಡಬ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ, ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ 2038 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

ಉಪ್ಪಿನಂಗಡಿ : ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಆಶ್ರಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಮತ್ತು ಕಡಬ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ, ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ 2038 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿ, ಪಾನಮುಕ್ತರಾಗಲು ದೃಢ ಮನಸ್ಸು, ಆತ್ಮಸ್ಥೈರ್ಯ ಹಾಗೂ ಏಕಾಗ್ರತೆ ಅಗತ್ಯ. ವ್ಯಸನಮುಕ್ತ ಸಮಾಜ ನಿರ್ಮಾಣದ ಪರಿಕಲ್ಪನೆ ಇಟ್ಟುಕೊಂಡು ಆರಂಭಗೊಂಡ ಮದ್ಯವರ್ಜನ ಶಿಬಿರಗಳಿಂದಾಗಿ ಸಾವಿರಾರು ಜನ ಉತ್ತಮ ಜೀವನ ಆರಂಭಿಸುತ್ತಿದ್ದಾರೆ. ಶಿಬಿರದ ಮೂಲಕ ಪಾನಮುಕ್ತಗೊಂಡವರು ಇನ್ನಷ್ಟು ಮಂದಿ ಮದ್ಯ ಮುಕ್ತರಾಗಲು ಪ್ರೇರಣೆಯಾಗಬೇಕೆಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ.ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಮಾತನಾಡಿ, ಬೆಳ್ತಂಗಡಿಯಲ್ಲಿ ಆರಂಭಗೊಂಡ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆ ಈಗ ರಾಜ್ಯದಾದ್ಯಂತ ವ್ಯಾಪಿಸಿದೆ. ಮದ್ಯವರ್ಜನ ಶಿಬಿರದ ಮೂಲಕ 2 ಲಕ್ಷಕ್ಕೂ ಹೆಚ್ಚು ಮಂದಿ ದುಶ್ಚಟಗಳಿಂದ ಮುಕ್ತರಾಗಿದ್ದಾರೆ. 8 ದಿನದ ಶಿಬಿರದ ಮೂಲಕ ಜೀವನ ಪರ್ಯಂತ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ. ಸವಣೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬೀನ್, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ದ.ಕ.-2 ಇದರ ನಿರ್ದೇಶಕ ಬಾಬು ನಾಯ್ಕ ಎ., ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್ ಮಾತನಾಡಿದರು.

2038 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಶ್ರೀಧರ ಗೋರೆ, ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ದ.ಕ.ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯರಾದ ಜಯಾನಂದ ಬಂಟ್ರಿಯಾಲ್, ಶಿವಪ್ರಸಾದ್ ಮೈಲೇರಿ, ಇಂದುಶೇಖರ ಶೆಟ್ಟಿ, ಶಿಬಿರದ ವೈದ್ಯಾಧಿಕಾರಿ ಡಾ.ಮೋಹನದಾಸ್ ಗೌಡ, ಗೋಳಿತ್ತೊಟ್ಟು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ನೆಲ್ಯಾಡಿ ವಲಯಾಧ್ಯಕ್ಷ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.

ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಬ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ನೆಲ್ಯಾಡಿ ಮೇಲ್ವಿಚಾರಕ ಆನಂದ ಡಿ.ಬಿ.ವಂದಿಸಿದರು. ರವಿಪ್ರಸಾದ್ ಮೇಲ್ವಿಚಾರಕರು ನಿರೂಪಿಸಿದರು. ಸೇವಾಪ್ರತಿನಿಧಿ ನಮಿತಾ ಎಸ್. ಶೆಟ್ಟಿ ಪ್ರಾರ್ಥಿಸಿದರು.