ಜನರ ಆರ್ಥಿಕ ಬಲವರ್ಧನೆಗೆ ಅರ್ಬನ್ ಬ್ಯಾಂಕುಗಳು ಸಹಕಾರಿ

| Published : Mar 10 2025, 12:18 AM IST

ಸಾರಾಂಶ

ಬ್ಯಾಂಕಿನ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯಂತ ಬದ್ಧತೆ ಮತ್ತು ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಪಟ್ಟಣ ಸಹಕಾರ ಬ್ಯಾಂಕುಗಳು ಅಭಿವೃದ್ಧಿ ಹೊಂದಲು ಸಾಧ್ಯ. ಜನರ ಆರ್ಥಿಕ ಸ್ಥಿತಿ ಬಲಗೊಳ್ಳಲು ಅರ್ಬನ್ ಬ್ಯಾಂಕುಗಳ ಸಹಕಾರ ಮಹತ್ವಪೂರ್ಣವಾಗಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿರ್ದೇಶಕ ಜೆ.ಆರ್. ಷಣ್ಮುಖಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

- ರಾಜ್ಯಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರದಲ್ಲಿ ನಿರ್ದೇಶಕ ಷಣ್ಮುಖಪ್ಪ ಅಭಿಮತ - - - ಕನ್ನಡಪ್ರಭ ವಾರ್ತೆ ದಾವಣಗೆರೆ ಬ್ಯಾಂಕಿನ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯಂತ ಬದ್ಧತೆ ಮತ್ತು ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಪಟ್ಟಣ ಸಹಕಾರ ಬ್ಯಾಂಕುಗಳು ಅಭಿವೃದ್ಧಿ ಹೊಂದಲು ಸಾಧ್ಯ. ಜನರ ಆರ್ಥಿಕ ಸ್ಥಿತಿ ಬಲಗೊಳ್ಳಲು ಅರ್ಬನ್ ಬ್ಯಾಂಕುಗಳ ಸಹಕಾರ ಮಹತ್ವಪೂರ್ಣವಾಗಿದೆ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿರ್ದೇಶಕ ಜೆ.ಆರ್. ಷಣ್ಮುಖಪ್ಪ ಹೇಳಿದರು.

ನಗರದ ಹೊರವಲಯದ ಮಾಗಾನಹಳ್ಳಿ ರಸ್ತೆಯ ಕೊಕೊ ಫಾಮ್ಸ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕುಗಳು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸಾಲ ನೀಡಿಕೆಯಲ್ಲಿ ಯಾವುದೇ ಶಿಫಾರಸುಗಳಿಗೆ ಮಣೆ ಹಾಕದೇ ಕಾನೂನು ರೀತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದರು.

ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಆರ್.ಜಿ. ಶ್ರೀನಿವಾಸಮೂರ್ತಿ ಮಾತನಾಡಿ, ಬ್ಯಾಂಕಿನ ಸಿಬ್ಬಂದಿ ಗ್ರಾಹಕರೊಂದಿಗೆ ಉತ್ತಮವಾಗಿ ವ್ಯವಹರಿಸಿದಲ್ಲಿ ಬ್ಯಾಂಕುಗಳು ಪ್ರಗತಿ ಕಾಣಲು ಸಾಧ್ಯ. ಅಂಥ ಮೂಲ ತತ್ವಗಳನ್ನು ಈ ರೀತಿಯ ತರಬೇತಿಗಳು ಕಲಿಸಿಕೊಡುತ್ತವೆ. ಬದಲಾದ ತಂತ್ರಜ್ಞಾನಕ್ಕೆ ನಾವೂ ಹೊಂದಿಕೊಳ್ಳುವುದು ಅನಿವಾರ್ಯ. ಆದ್ದರಿಂದ ಬ್ಯಾಂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿ ತರಬೇತಿ ಕಾರ್ಯಾಗಾರದ ಪ್ರಯೋಜನ ಪಡೆದು, ಬ್ಯಾಂಕಿನ ಪ್ರಗತಿಗೆ ಶ್ರಮಿಸಬೇಕೆಂದು ತಿಳಿಸಿದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿರಿಗೆರೆ ರಾಜಣ್ಣ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್, ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಕೆ.ಜಿ ಸುರೇಶ್, ಸಿದ್ದೇಶ್ ಎಚ್.ಆರ್., ಎಸ್.ಜಿ.ಸತೀಶ್, ಎನ್.ಎಸ್ ನಿರ್ಮಲ ಸುಭಾಷ್, ಒಕ್ಕೂಟದ ಸಿಬ್ಬಂದಿ ಕೆ.ಎಂ ಜಗದೀಶ್, ವಿ. ರಂಗನಾಥ, ಆರ್. ಸ್ವಾಮಿ ಮತ್ತಿತರರು ಕಾರ್ಯಾಗಾರದಲ್ಲಿ ಹಾಜರಿದ್ದರು.

ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಕೋಡಿಹಳ್ಳಿ ಸ್ವಾಗತಿಸಿದರೆ, ಒಕ್ಕೂಟದ ಜಿಲ್ಲಾ ಸಹಕಾರ ಶಿಕ್ಷಕ ಕೆ.ಎಚ್. ಸಂತೋಷ್‌ ಕುಮಾರ ಕಾರ್ಯಕ್ರಮ ನಿರೂಪಿಸಿದರು. ಅನಂತರ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯ ಕುರಿತು ಉಪನ್ಯಾಸ ನೀಡಿದರು.

- - -

ಕೋಟ್‌ ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಎಷ್ಟೇ ತರಬೇತಿ ಪಡೆದರೂ ಸಾಲದು. ಬ್ಯಾಂಕ್ ಮತ್ತು ಸಹಕಾರ ಕ್ಷೇತ್ರದಲ್ಲಿ ನಿತ್ಯ ಆಗುತ್ತಿರುವ ಬದಲಾವಣೆಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಉತ್ಸುಕರಾಗಿರಬೇಕು

- ಕೋಗುಂಡಿ ಬಕ್ಕೇಶಪ್ಪ, ಅಧ್ಯಕ್ಷ, ಡಿಸಿಸಿ ಬ್ಯಾಂಕ್‌

- - - -8ಕೆಡಿವಿಜಿ40.ಜೆಪಿಜಿ:

ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರವನ್ನು ಜೆ.ಆರ್.ಷಣ್ಮುಖಪ್ಪ ಉದ್ಘಾಟಿಸಿದರು.