ಸಾರಾಂಶ
ತರೀಕೆರೆ: ಪಟ್ಟಣದ ಪುರಸಭೆ ಸದಸ್ಯ ಹಾಗೂ ಬಿಜೆಪಿ ಪಕ್ಷದ ಮುಖಂಡರಾದ ಟಿ.ಎಂ.ಬೋಜರಾಜ್ ಅವರು ಮಂಗಳವಾರದಂದು ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಪಟ್ಟಣದಲ್ಲಿ ನಡೆಯುತ್ತಿರುವ ನಗರೋತ್ಥಾನ ಯೋಜನೆಯ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಗಳ ಕುರಿತು ದೂರು ಸಲ್ಲಿಸಿದರು.
ತರೀಕೆರೆ: ಪಟ್ಟಣದ ಪುರಸಭೆ ಸದಸ್ಯ ಹಾಗೂ ಬಿಜೆಪಿ ಪಕ್ಷದ ಮುಖಂಡರಾದ ಟಿ.ಎಂ.ಬೋಜರಾಜ್ ಅವರು ಮಂಗಳವಾರದಂದು ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಪಟ್ಟಣದಲ್ಲಿ ನಡೆಯುತ್ತಿರುವ ನಗರೋತ್ಥಾನ ಯೋಜನೆಯ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಗಳ ಕುರಿತು ದೂರು ಸಲ್ಲಿಸಿದರು.ಕಾಮಗಾರಿಗೆ ಕಳೆದ ಎರಡು ವರ್ಷಗಳ ಹಿಂದೆಯೇ ಚಾಲನೆ ನೀಡಲಾಗಿದ್ದರೂ ಈವರೆಗೂ ಕಾಮಗಾರಿ ಪೂರ್ಣವಾಗಿಲ್ಲ . ಈಗಾಗಲೇ ಮುಗಿದಿರುವ ಕೆಲವು ಕಾಮಗಾರಿಗಳು ಕಳಪೆಯಾಗಿದ್ದು, ಸಕಾ೯ರದ ಕಾಯ೯ಕ್ರಮದ ಬಗ್ಗೆ ನಾಗರೀಕರಲ್ಲಿ ಅಸಮಾಧಾನ ಮೂಡಿದೆ. ಕಾಮಗಾರಿಯನ್ನು ಪರೀಶೀಲಿಸಲು ಸಂಬಂಧಪಟ್ಟ ಅಧಿಕಾರಿಗಳು ನಿಲ೯ಕ್ಷ್ಯ ವಹಿಸಿದ್ದಾರೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.ಪಟ್ಟಣದ ಪುರಸಭೆಯು ಸುಮಾರು 50 ಸಾವಿರ ಜನಸಂಖ್ಯೆಯನ್ನು ಹೊಂದಿದ್ದು, ನೌಕರರ ಕೊರತೆಯ ಕಾರಣಕ್ಕೆ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತು ಸಾವ೯ಜನಿಕ ಕೆಲಸ ಕಾರ್ಯಗಳಿಗೆ ತೊಂದರೆ ಯಾಗುತ್ತಿದೆ ಎಂದು ತಿಳಿಸಿದರು.
ಹಿರಿಯ ಅಭಿಯಂತರರ 2 ಹುದ್ದೆಗಳು, ಒಬ್ಬರು ಹಿರಿಯ ಆರೋಗ್ಯ ನಿರೀಕ್ಷಕ, ಇಬ್ಬರು ಕಿರಿಯ ಆರೋಗ್ಯ ನಿರೀಕ್ಷಕ ಮತ್ತು ಕರ ವಸೂಲಿಗಾರರ ಹುದ್ದೆಗಳು ಖಾಲಿಯಾಗಿದ್ದು ಕೂಡಲೇ ತುಂಬಬೇಕು . ಪಟ್ಟಣದಲ್ಲಿ ಬೇಡಿಕೆ ಇರುವ ವಿದ್ಯುತ್ ದೀಪಗಳನ್ನು ಸರಬರಾಜು ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು ಎಂದು ಮನವಿಯಲ್ಲಿ ಅವರು ಒತ್ತಾಯಿಸಿದ್ದಾರೆ.ಸದಸ್ಯರ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿಗಳು ಶೀಘ್ರದಲ್ಲೇ ಪಟ್ಟಣಕ್ಕೆ ಭೇಟಿ ನೀಡಿ ಪರೀಶಿಲಿಸುವುದಾಗಿ ತಿಳಿಸಿದ್ದಾರೆ ಎಂದು ಸದಸ್ಯ ಟಿ.ಎಂ.ಬೋಜರಾಜ್ ಅವರು ತಿಳಿಸಿದ್ದಾರೆ.