ನಗರೀಕರಣದಿಂದ ಕೃಷಿಗೆಕುತ್ತು : ಶಾಸಕರ ಆತಂಕ

| N/A | Published : Jul 12 2025, 01:48 AM IST / Updated: Jul 12 2025, 10:30 AM IST

ಸಾರಾಂಶ

ನಗರೀಕರಣದ ಭರದಲ್ಲಿ ಜನತೆ ಕೃಷಿಯನ್ನು ಮರೆಯುತ್ತಿರುವುದು ಅಪಾಯಕಾರಿ ಸಂಗತಿಯಾಗಿದೆ ಎಂದು ಶಾಸಕ ಎಸ್‌.ಆರ್‌. ವಿಶ್ವನಾಥ್‌ ಆತಂಕ ವ್ಯಕ್ತಪಡಿಸಿದರು.

 ಬೆಂಗಳೂರು :  ನಗರೀಕರಣದ ಭರದಲ್ಲಿ ಜನತೆ ಕೃಷಿಯನ್ನು ಮರೆಯುತ್ತಿರುವುದು ಅಪಾಯಕಾರಿ ಸಂಗತಿಯಾಗಿದೆ ಎಂದು ಶಾಸಕ ಎಸ್‌.ಆರ್‌. ವಿಶ್ವನಾಥ್‌ ಆತಂಕ ವ್ಯಕ್ತಪಡಿಸಿದರು.

ಬಾಗಲಕೋಟೆಯ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ನಗರದ ತೋಟಗಾರಿಕಾ ಮಹಾವಿದ್ಯಾಲಯದ ಆಶ್ರಯದಲ್ಲಿ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಮೂರು ದಿನಗಳ ‘ಸಸ್ಯ ಸಂತೆ’ಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ನಗರೀಕರಣದ ಭರದಲ್ಲಿ ಜನರು ಕೃಷಿಯನ್ನು ಮರೆಯುತ್ತಿದ್ದು, ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ಆದ್ದರಿಂದ ಕೃಷಿಗೆ ಆದ್ಯತೆ ನೀಡಬೇಕು. ಸಾಂಪ್ರದಾಯಿಕ ಪದ್ಧತಿಗಳ ಜೊತೆಗೆ ವಿಜ್ಞಾನಿಗಳು ಸಂಶೋಧಿಸಿದ ನವೀನ ವೈಜ್ಞಾನಿಕ ಪದ್ಧತಿಗಳನ್ನು ಅನುಸರಿಸಿದರೆ ದೇಶದ 150 ಕೋಟಿ ಜನಸಂಖ್ಯೆಗೆ ಪೌಷ್ಠಿಕ ಆಹಾರ ಒದಗಿಸಬಹುದು ಎಂದು ಹೇಳಿದರು.

ಇದಕ್ಕೂ ಮುನ್ನ ಶಾಸಕರು ಸಸ್ಯ ಸಂತೆಯ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ವೀಕ್ಷಿಸಿದರು. ಬಾಗಲಕೋಟೆ ತೋಟಗಾರಿಕಾ ವಿವಿಯ ವಿಶ್ರಾಂತ ಕುಲಪತಿ ಡಾ.ಎಸ್‌.ಬಿ.ದಂಡಿನ, ತೋಟಗಾರಿಕಾ ಮಹಾವಿದ್ಯಾಲಯದ ಮುಖ್ಯಸ್ಥ ಡಾ.ಜಿ.ಎಸ್‌.ಕೆ.ಸ್ವಾಮಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧ್ಯಕ್ಷ ಡಾ.ಎ.ಎಚ್‌.ರಾಜಾಸಾಬ್‌, ನಟ ಶಶಿಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Read more Articles on