ಸಾರಾಂಶ
ನರಸಿಂಹರಾಜಪುರ, ರಾಜ್ಯ ವೇತನ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಮಂಜುನಾಥ್ ಸರ್ಕಾರವನ್ನು ಒತ್ತಾಯಿಸಿದರು.
ಸರ್ಕಾರಿ ನೌಕರರ ಸಂಘದಿಂದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರರಾಜ್ಯ ವೇತನ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಮಂಜುನಾಥ್ ಸರ್ಕಾರವನ್ನು ಒತ್ತಾಯಿಸಿದರು.
ಗುರುವಾರ ತಾಲೂಕು ಕಚೇರಿ ಮುಂಭಾಗದಲ್ಲಿ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು.7 ನೇ ವೇತನ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಫಿಟ್ ಮೆಂಟ್ ಸೌಲಭ್ಯವನ್ನು ಕನಿಷ್ಠ ಶೇ 27.50 ರಷ್ಟು ಹೆಚ್ಚಿಸಿ 2022 ರ ಜುಲೈ 1 ರಿಂದ ಅನ್ವಯ ವಾಗುವಂತೆ ವೇತನ ನಿಗದಿ ಪಡಿಸಿ ಆದೇಶ ಮಾಡಬೇಕು ಎಂದು ಒತ್ತಾಯಿಸಿದರು.ಅಲ್ಲದೆ ರಾಜ್ಯ ಎನ್ ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರ ವಾಗಿರುವುದರಿಂದ ಎನ್ ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಬ್ದಾರಿ ಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ತಾನ, ಚತ್ತೀಸ್ ಗಡ ಮುಂತಾದ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರು ವಂತೆ ಕರ್ನಾಟಕ ರಾಜ್ಯದಲ್ಲೂ ಎನ್ ಪಿಎಸ್ ಯೋಜನೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಂಜುಂಡಪ್ಪ, ಎನ್ ಪಿಎಸ್ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿದರು. ನಂತರ ತಹಸೀಲ್ದಾರ್ ತನುಜ ಟಿ.ಸವದತ್ತಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸುಭಾಷ್, ನಿರ್ದೇಶಕ ಬೋಗೇಶ್, ಸಂಘದ ರಾಜ್ಯ ಪರಿಷತ್ ಸದಸ್ಯ ಕೃಷ್ಣಪ್ಪ ಸಂಘದ ಎಲ್ಲಾ ಪದಾಧಿಕಾರಿಗಳು, ಸರ್ಕಾರಿ ನೌಕರರು ಇದ್ದರು.