ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಜಾತಿ ಜನಗಣತಿ ಸಮೀಕ್ಷೆಯ ವರದಿಯನ್ನ ಕೂಡಲೇ ಸರ್ಕಾರ ಜಾರಿ ಮಾಡುವಂತೆ ಒತ್ತಾಯಿಸಿ ಅ.16ರ ಬೆಳಗ್ಗೆ 11ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ತಿಳಿಸಿದರು.ಸಿದ್ದಾರ್ಥನಗರದಲ್ಲಿರುವ ಕನಕ ಭವನದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಜಾತಿ ಜನಗಣತಿ ವಿಚಾರವಾಗಿ ಹೋರಾಟ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತಾಡಿದ ಅವರು, ಮೈಸೂರಿನಿಂದ ಸುಮಾರು 5 ಸಾವಿರ ಜನ ತೆರಳಿಲಿದ್ದೇವೆ ಎಂದರು.ಅ.18 ರಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಜಾತಿ ಜನಗಣತಿ ಸಮೀಕ್ಷೆಯ ವರದಿಯನ್ನ ಜಾರಿ ಮಾಡಬೇಕೆಂದು ಒತ್ತಾಯಿಸಿ, ಅ.16 ರಂದು ನಡೆಯುವ ಧರಣಿ ಸತ್ಯಾಗ್ರಹಕ್ಕೆ ಎಲ್ಲರೂ ಪಾಲ್ಗೊಳ್ಳುವ ಮೂಲಕ ಧ್ವನಿ ಎತ್ತಬೇಕು. ಈ ಜಾತಿ ಗಣತಿ ಜಾರಿ ಮಾಡುವುದರಿಂದ ಪ್ರತಿಯೊಬ್ಬರಿಗೂ ಅನುಕೂಲವಾಗಲಿದೆ. ಈ ವಿಚಾರಕ್ಕೆ ಪಕ್ಷತೀತವಾಗಿ ಒಮ್ಮತದಿಂದ ಕ್ಯಾಬಿನೆಟ್ ಸಭೆಯಲ್ಲಿ, ವಿಧಾನಸಭೆಯಲ್ಲಿ ಮಂಡನೆ ಮಾಡಬೇಕು ಎಂದು ಮನವಿ ಮಾಡಿದರು.ಸಭೆಯಲ್ಲಿ ಮುಖಂಡರಾದ ರಾಮಚಂದ್ರಪ್ಪ, ಅನಂತನಾಯಕ, ನಾಗರಾಜ್ , ರಾಮಸ್ವಾಮಿ, ರಾಮೇಗೌಡ, ಪುಟ್ಟಸಿದ್ದೆಗೌಡ, ಆನಂದ್, ಕೆಂಪಣ್ಣ ಮೊದಲಾದವರು ಇದ್ದರು.