ಬಿಸಿಎಂ ಹಾಸ್ಟೆಲ್‌ಗಳ ಆರಂಭಕ್ಕೆ ಒತ್ತಾಯ

| Published : Jun 24 2024, 01:31 AM IST

ಸಾರಾಂಶ

ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ಸರ್ಕಾರದ ಸೂಕ್ತ ಹಾಸ್ಟೆಲ್ ವ್ಯವಸ್ಥೆ ಇಲ್ಲದೆ ಅನೇಕ ತೊಂದರೆಗಳನ್ನ ಅನುಭವಿಸುತ್ತಿದ್ದಾರೆ.

ಹೊಸಪೇಟೆ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಗರದಲ್ಲಿ ಹೊಸದಾಗಿ 13 ಬಾಲಕ, ಬಾಲಕಿಯರ ಬಿಸಿಎಂ ಹಾಸ್ಟೆಲ್‌ಗಳನ್ನು ಆರಂಭಿಸಬೇಕು ಎಂದು ದಲಿತ ಹಕ್ಕುಗಳ ಸಮಿತಿ ಶಾಸಕ ಎಚ್.ಆರ್‌. ಗವಿಯಪ್ಪ ಅವರನ್ನು ಒತ್ತಾಯಿಸಿದೆ.

ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆ ಎಲ್ಲ ರೀತಿಯ ಶೈಕ್ಷಣಿಕ ಸಂಸ್ಥೆಗಳು ಇದ್ದು, ಜಿಲ್ಲೆಯ ಸುತ್ತಮುತ್ತಲಿನ ಜಿಲ್ಲೆಗಳಾದ ಕೊಪ್ಪಳ, ರಾಯಚೂರು ಬಳ್ಳಾರಿ, ಗದಗ, ದಾವಣಗೆರೆಯ ಹಿಂದುಳಿದ ವರ್ಗದ ಬಡ ವಿದ್ಯಾರ್ಥಿಗಳು ಹೊಸಪೇಟೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ಸರ್ಕಾರದ ಸೂಕ್ತ ಹಾಸ್ಟೆಲ್ ವ್ಯವಸ್ಥೆ ಇಲ್ಲದೆ ಅನೇಕ ತೊಂದರೆಗಳನ್ನ ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕನಿಷ್ಠ 13 ಹಾಸ್ಟೆಲ್ ಗಳನ್ನ ಹೊಸದಾಗಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

2023-2024ನೇ ಸಾಲಿನಲ್ಲಿ ಹಾಸ್ಟೆಲ್ ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ 1350 ಇದ್ದು, ಪ್ರವೇಶ ಸಿಕ್ಕಿದ್ದು 650 ವಿದ್ಯಾರ್ಥಿಗಳಿಗೆ ಮಾತ್ರ. ಇನ್ನುಳಿದ 700 ವಿದ್ಯಾರ್ಥಿಗಳು ಅವಕಾಶ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ. ಹೊಸ ಆದೇಶದಲ್ಲಿ ಕೇವಲ 2 ಹಾಸ್ಟೆಲ್ ಗಳನ್ನ ಮಾತ್ರ ಮಂಜೂರು ಮಾಡಿರುವುದು ಸರಿಯಲ್ಲ. ಕೂಡಲೇ ಸರ್ಕಾರದ ಆದೇಶವನ್ನು ಮರುಪರಿಶೀಲಿಸಬೇಕು. ಈ ಕುರಿತು ಶಾಸಕ ಎಚ್.ಆರ್‌. ಗವಿಯಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ, ಬಿಸಾಟಿ ತಾಯಪ್ಪ ನಾಯಕ, ಸೂರ್ಯನಾರಾಯಣ ಮತ್ತಿತರರಿದ್ದರು.