ಸವಾಲುಗಳ ಅವಕಾಶವಾಗಿ ಬಳಸಿ: ಸುಯೋಗ್‌ ಶೆಟ್ಟಿ

| Published : Mar 11 2025, 12:46 AM IST

ಸವಾಲುಗಳ ಅವಕಾಶವಾಗಿ ಬಳಸಿ: ಸುಯೋಗ್‌ ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ವಾರ್ಷಿಕೋತ್ಸ ಇತ್ತೀಚೆಗೆ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಯಿತು.ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಮತ್ತು ಅತಿಥಿಗಳು ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ವಾರ್ಷಿಕೋತ್ಸ ಇತ್ತೀಚೆಗೆ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಯಿತು.ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಮತ್ತು ಅತಿಥಿಗಳು ಭಾಗವಹಿಸಿದ್ದರು.

ನಿವಿಯಸ್ ಸೊಲ್ಯೂಷನ್ಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಯೋಗ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವೃತ್ತಿಜೀವನದ ಬೆಳವಣಿಗೆ, ನಾವೀನ್ಯತೆ ಮತ್ತು ನಿರಂತರವಾಗಿ ವಿಕಸನಗೊಳ್ಳುತ್ತಿರುವ ತಂತ್ರಜ್ಞಾನ ಭೂದೃಶ್ಯದಲ್ಲಿ ಹೊಂದಾಣಿಕೆಯ ಪ್ರಾಮುಖ್ಯತೆಯ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಹಂಚಿಕೊಂಡರು.

ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ನಿರ್ದೇಶಕ ಪ್ರೊ.ಎ.ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳ ಬದ್ಧತೆ ಮತ್ತು ಕಠಿಣ ಪರಿಶ್ರಮವನ್ನು ಶ್ಲಾಘಿಸಿದ ಅವರು, ಸಮಗ್ರ ಅಭಿವೃದ್ಧಿ ಉತ್ತೇಜಿಸುವ ಸಂಸ್ಥೆಯ ಬದ್ಧತೆಯನ್ನು ವಿವರಿಸಿದರು.

ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಶೈಕ್ಷಣಿಕ ಹಾಗೂ ಕ್ರೀಡಾ ವಿಭಾಗಗಳಲ್ಲಿ ಉನ್ನತ ಸಾಧಕರಿಗೆ ಬಹುಮಾನ ವಿತರಿಸಲಾಯಿತು. ಕೌನ್ಸಲಿಂಗ್, ವೆಲ್ಫೇರ್, ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ವಿಭಾಗದ ಸಹಕಾರದೊಂದಿಗೆ ಆಯ್ಕೆ ಪ್ರಕ್ರಿಯೆ ನಡೆಸಿ ಸಾಧನೆಗಳನ್ನು ಗುರುತಿಸುವ ಸಂಸ್ಥೆಯ ಹಳೆ ವಿದ್ಯಾರ್ಥಿ, ಉದ್ಯಮಿ ಎನ್. ಸಂಜಿತ್ ಶೆಟ್ಟಿ ಪ್ರಾಯೋಜಿತ ಪ್ರಶಸ್ತಿಯನ್ನು ಕೌನ್ಸಲಿಂಗ್, ವೆಲ್ಫೇರ್, ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ವಿಭಾಗದ ಮಾಜಿ ಮುಖ್ಯಸ್ಥೆ ಪ್ರೊ. ಶಾಲಿನಿ ಕೆ ಶರ್ಮಾ ಹಾಗೂ ಸಂಜಿತ್ ಶೆಟ್ಟಿ ಫೌಂಡೇಶನ್ ನ ಸಿಇಒ ವಿವೇಕ್ ವಿಶ್ವನಾಥನ್ ಅವರ ಸಮ್ಮುಖದಲ್ಲಿ ವಿತರಿಸಲಾಯಿತು.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್‌ಕರ್ ಸ್ವಾಗತಿಸಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಉಪಪ್ರಾಂಶುಪಾಲ ಡಾ.ಐ.ಆರ್ ಮಿತ್ತಂತಾಯ ವಿದ್ಯಾರ್ಥಿ ಸಾಧಕರ ಪಟ್ಟಿ ವಾಚಿಸಿದರು. ಉದ್ಯಮಿ ಹಾಗೂ ಹಳೆವಿದ್ಯಾರ್ಥಿ ಎನ್ ಸಂಜಿತ್ ಶೆಟ್ಟಿ ಪ್ರಾಯೋಜಿತ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಎಲ್ಯೂಮ್ನೈ ಸೆಲ್ ನ ಸಂಯೋಜಕ ಡಾ. ಗ್ರೈನಲ್ ಡಿಮೆಲ್ಲೊ ವಾಚಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಗಣೇಶ್ ಪೂಜಾರಿ ಕ್ರೀಡಾ ವಿಭಾಗದ ಸಾಧಕರ ಪಟ್ಟಿಯನ್ನು ವಾಚಿಸಿದರು. ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಅತಿಥಿಯನ್ನು ಸಭೆಗೆ ಪರಿಚಯಿಸಿದರು. ಕಾರ್ಯಕ್ರಮ ಸಂಯೋಜಕ ಡಾ.ನರಸಿಂಹ ಬೈಲ್ಕೇರಿ, ಡೀನ್-ಸ್ಟೂಡೆಂಟ್ ವೆಲ್ಫೇರ್ ವಂದಿಸಿದರು. ವಿದ್ಯಾರ್ಥಿನಿ ವಿಧಾತ್ರಿ ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ಆಂಡ್ರ್ಯೂ ಡಿಅಲ್ಮೆಡಾ ಮತ್ತು ಕುಷಿ ಮಲ್ಲಿ ನಿರೂಪಿಸಿದರು.