ವಿದ್ಯಾರ್ಥಿಗಳು ಕಲಿಕೆಗೆ ಅಗತ್ಯ ಇರುವಷ್ಟು ಮಾತ್ರ ಮೊಬೈಲ್ ಬಳಕೆ ಮಾಡಬೇಕು ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವ ಜತೆಗೆ ಈ ರೀತಿಯ ಕಾರ್ಯಕ್ರಮಗಳಲ್ಲಿ ಸನ್ಮಾನ ಸ್ವೀಕರಿಸುವ ಮನಸ್ಥಿತಿ ನಿರ್ಮಿಸಿಕೊಂಡು ಗುರಿ ಸಾಧನೆಗೆ ಮುನ್ನಡೆಯುವುದು ಅತ್ಯಗತ್ಯವೆಂದು ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ಸಲಹೆ ನೀಡಿದರು. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗ, ಕಲಾ ವಿಭಾಗ ಹಾಗೂ ವಿಜ್ಞಾನ ವಿಭಾಗದಲ್ಲಿ ಅತಿಹೆಚ್ಚು ಅಂಕ ಪಡೆದ ೯ ವಿದ್ಯಾರ್ಥಿಗಳು, ಎಸ್‌ಎಸ್‌ಎಲ್‌ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ೪ ವಿದ್ಯಾರ್ಥಿಗಳು ಹಾಗೂ ಶೇ.೮೫ಕ್ಕೂ ಹೆಚ್ಚು ಅಂಕ ಪಡೆದ ಸೋಷಿಯಲ್ ಕ್ಲಬ್ ಸದಸ್ಯರ ಮಕ್ಕಳಿಗೆ ಪ್ರಶಸ್ತಿ ಪತ್ರ, ನಗದು ಬಹುಮಾನ ನೀಡಿ, ಅಭಿನಂದಿಸಿದರು.
ಕನ್ನಡಪ್ರಭ ವಾರ್ತೆ ಹೊಳೆನರಸೀಪುರವಿದ್ಯಾರ್ಥಿಗಳು ಕಲಿಕೆಗೆ ಅಗತ್ಯ ಇರುವಷ್ಟು ಮಾತ್ರ ಮೊಬೈಲ್ ಬಳಕೆ ಮಾಡಬೇಕು ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವ ಜತೆಗೆ ಈ ರೀತಿಯ ಕಾರ್ಯಕ್ರಮಗಳಲ್ಲಿ ಸನ್ಮಾನ ಸ್ವೀಕರಿಸುವ ಮನಸ್ಥಿತಿ ನಿರ್ಮಿಸಿಕೊಂಡು ಗುರಿ ಸಾಧನೆಗೆ ಮುನ್ನಡೆಯುವುದು ಅತ್ಯಗತ್ಯವೆಂದು ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ಸಲಹೆ ನೀಡಿದರು. ಪಟ್ಟಣದ ಸೋಷಿಯಲ್ ಕ್ಲಬ್ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಕಲಿತ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸೋಷಿಯಲ್ ಕ್ಲಬ್ ವತಿಯಿಂದ ಗುರುತಿಸಿ, ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯವೆಂದರು. ಬಿಇಒ ಸೋಮಲಿಂಗೇಗೌಡ ಅವರು ೨೦೨೫-೨೬ನೇ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗ, ಕಲಾ ವಿಭಾಗ ಹಾಗೂ ವಿಜ್ಞಾನ ವಿಭಾಗದಲ್ಲಿ ಅತಿಹೆಚ್ಚು ಅಂಕ ಪಡೆದ ೯ ವಿದ್ಯಾರ್ಥಿಗಳು, ಎಸ್‌ಎಸ್‌ಎಲ್‌ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ೪ ವಿದ್ಯಾರ್ಥಿಗಳು ಹಾಗೂ ಶೇ.೮೫ಕ್ಕೂ ಹೆಚ್ಚು ಅಂಕ ಪಡೆದ ಸೋಷಿಯಲ್ ಕ್ಲಬ್ ಸದಸ್ಯರ ಮಕ್ಕಳಿಗೆ ಪ್ರಶಸ್ತಿ ಪತ್ರ, ನಗದು ಬಹುಮಾನ ನೀಡಿ, ಅಭಿನಂದಿಸಿದರು. ಸೋಷಿಯಲ್ ಕ್ಲಬ್ ಅಧ್ಯಕ್ಷ ಕೆ.ಎಂ.ಹೊನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ವಿ.ಸುರೇಶ್ ಕುಮಾರ್ ಪ್ರಾಸ್ತವಿಕ ನುಡಿಗಳನ್ನಾಡಿದರು ಹಾಗೂ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಉಪನ್ಯಾಸಕಿ ಫಕೀರಮ್ಮ ಪಿ ಮುರಗೋಡ್ ನಿರೂಪಿಸಿದರು. ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಉಪನ್ಯಾಸಕ ಡಾ. ಕೃಷ್ಣಮೂರ್ತಿ, ಕ್ಲಬ್ ಸದಸ್ಯರಾದ ಶಂಕರನಾರಾಯಣ್ ಐತಾಳ್, ಮಳಲಿ ನಾರಾಯಣ್, ಎಚ್.ಜಿ.ವೆಂಕಟೇಶ್, ನಟರಾಜ್, ನಾಗರಾಜ್, ಮಹೇಶ್ ಬಿ.ಎನ್., ವಿಜಯಕುಮಾರ್, ಕೃಷ್ಣಕಾಂತ್, ಸೋಮಶೇಖರ್ ಇದ್ದರು.