ಉತ್ತಮ ವಿಚಾರಗಳಿಗಾಗಿ ಮೊಬೈಲ್ ಬಳಸಿ: ಕೆ ಬಿ ಉಷಾರಾಣಿ

| Published : Mar 31 2024, 02:12 AM IST

ಉತ್ತಮ ವಿಚಾರಗಳಿಗಾಗಿ ಮೊಬೈಲ್ ಬಳಸಿ: ಕೆ ಬಿ ಉಷಾರಾಣಿ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಮೊಬೈಲ್‌ಗೀಳನ್ನು ಬಿಟ್ಟು ಉತ್ತಮ ವಿಚಾರಗಳಿಗಾಗಿ ಮೊಬೈಲ್‌ ಬಳಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ಬಿಟ್ಟು ಉತ್ತಮ ವಿಚಾರಗಳಿಗಾಗಿ ಮಾತ್ರ ಮೊಬೈಲ್ ಬಳಸಿಕೊಳ್ಳಬೇಕು ಎಂದು ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಅಧ್ಯಾಪಕಿ ಕೆ ಬಿ ಉಷಾರಾಣಿ ತಿಳಿಸಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸರ್ಕಾರಿ ಮಹಿಳಾ ಕಾಲೇಜು ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ಸರ್ಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆದ ದಿ.ಸೂದನ ರಾಘವಯ್ಯ ದತ್ತಿನಿಧಿ ಕಾರ್ಯ ಕ್ರಮದಲ್ಲಿ ಅವರು ದತ್ತಿ ಉಪನ್ಯಾಸ ನೀಡಿ ಮಾತನಾಡಿ, ವಿಷಯಧಾರಿತ ಪುಸ್ತಕಗಳನ್ನು ಬೋಧನೆ ಮಾಡುವ ಶಿಕ್ಷಕರನ್ನು ಪ್ರೀತಿಸಿ ಸಹನೆಯಿಂದ ಶಿಕ್ಷಣವನ್ನು ಬೋಧಿಸುವ ಶಿಕ್ಷಕರನ್ನು ಗೌರವಿಸಿ ಅವರ ಸಕಾರಾತ್ಮಕ ಗುಣಗಳನ್ನು ಸ್ಮರಿಸಿಕೊಂಡಾಗ ವಿಚಾರಗಳು ಶಾಶ್ವತವಾಗಿ ಮನಸ್ಸಿನಲ್ಲಿ ಉಳಿದುಕೊಳ್ಳುತ್ತವೆ. ಪಠ್ಯದ ಪರೀಕ್ಷೆಯೊಂದಿಗೆ ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ ಅವರು, ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯ ಚಟುವಟಿಕೆಗಳಿಗೆ ಸೀಮಿತವಾಗದೆ ದತ್ತಿನಿಧಿಗಳಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಪಯುಕ್ತವಾಗುವ ಅವರ ಮನಮುಟ್ಟುವ ಉಪನ್ಯಾಸ ಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ದತ್ತಿ ದಾನಿಗಳಾದ ನಿವೃತ್ತ ಪ್ರಾಂಶುಪಾಲರು ಮಲೆಬಾವು ಉಷಾ ರವಿ ಅವರು ಪರಿಷತ್ತಿನ ಗೌರವ ಸ್ವೀಕರಿಸಿ ಮಾತನಾಡಿ ತಮ್ಮ ತಂದೆ ನಿವೃತ್ತ ಶಿಕ್ಷಕರು ರಾಜ್ಯ ಪ್ರಶಸ್ತಿ ಪುರಸ್ಕೃತರಾದ ದಿವಂಗತ ಸೂದನ ರಾಘವಯ್ಯ ಅವರ ಹೆಸರಿನಲ್ಲಿ ದತ್ತಿ ಸ್ಥಾಪನೆ ಮಾಡಲಾಗಿದೆ ಪ್ರತಿ ವರ್ಷ ಕನ್ನಡ ಮಾಧ್ಯಮ ದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಯನ್ನು ಗೌರವಿಸುವುದು ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಸವಾಲು ಕುರಿತು ಉಪನ್ಯಾಸ ನೀಡುವಂತೆ ದತ್ತಿ ನೀಡಲಾಗಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿ, ದತ್ತಿ ಉಪನ್ಯಾಸ ಕಾರ್ಯಕ್ರಮಗಳಿಂದ ದತ್ತಿ ದಾನಿಗಳ ಹೆಸರು ಬದುಕು ಅವರ ಸಾಧನೆಯ ಬಗ್ಗೆ ಪ್ರತಿವರ್ಷವೂ ನೆನಪಿನಲ್ಲಿ ಉಳಿಯುವಂತೆ ಮಾಡುತ್ತದೆ ಹಾಗೂ ಅವರ ವಿಚಾರ ತಿಳಿದಂತಾಗುತ್ತದೆ ಎಂದು ದತ್ತಿ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಇದೇ ಸಂದರ್ಭ 2022 /23 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಥಮ ಸ್ಥಾನ ಪಡೆದ ಐಗೂರು ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಿ.ಬಿ. ಬೆಸಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್ಐ ಮುನಿರ್ ಅಹ್ಮದ್ , ರೇವತಿ ರಮೇಶ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಅಂಬೆಕಲ್ಲು ನವೀನ್, ಕಾರ್ಯದರ್ಶಿ ರಿಶಿತ್ ಮಾದಯ್ಯ, ರೇಣುಕಾ , ಅಲ್ಲಾರಂಡ ವಿಠಲ್ ನಂಜಪ್ಪ, ಕಾಲೇಜಿನ ಉಪನ್ಯಾಸಕರು, ಪೋಷಕರು ಸೇರಿದಂತೆ ಮುಖ್ಯ ಪಟ್ಟವರು ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ ಉಪನ್ಯಾಸಕಿ ಡಾ.ಕೋರನ ಸರಸ್ವತಿ ಪ್ರಕಾಶ್ ಸ್ವಾಗತಿಸಿ ಸಂಘಟನಾ ಕಾರ್ಯದರ್ಶಿ ಚೊಕ್ಕಾಡಿ ಪ್ರೇಮ ರಾಘವಯ್ಯ ವಂದಿಸಿದರು ಉಪನ್ಯಾಸಕಿ ನಿರ್ಮಲ ಕಾರ್ಯಕ್ರಮ ನಿರೂಪಿಸಿದರು.