ನರೇಗಾ ಕಾಮಗಾರಿಗೆ ಯಂತ್ರಗಳ ಬಳಕೆ

| Published : Apr 21 2025, 12:47 AM IST

ಸಾರಾಂಶ

ಕೋಲಾರ ತಾಲೂಕಿನ ತೊಟ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಹೆಚ್ಚುವರಿಯಾಗಿ ಕ್ರಿಯಾ ಯೋಜನೆ ತಯಾರಿಸಿದ್ದು ಪಂಚಾಯಿತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದಿಸಿರುವ ಕಾಮಗಾರಿಗಳನ್ನು ಕೈಗೆತ್ತುಕೊಳ್ಳಲಾಗಿದೆ. ಎಲ್ಲ ಕಾಮಗಾರಿಗಳಿಗೆ ಹೆಚ್ಚಾಗಿ ಯಂತ್ರೋಪಕರಣಗಳನ್ನೇ ಬಳಸಲಾಗುತ್ತಿದೆ

ಕನ್ನಡಪ್ರಭ ವಾರ್ತೆ ಕೋಲಾರಕೇಂದ್ರ ಸರ್ಕಾರ ಬಡತನ ನಿರ್ಮೂಲನೆ ಜೊತೆಗೆ ಗ್ರಾಮಗಳ ಅಭಿವೃದ್ಧಿಗೆಂದು ಮಾಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಅನಷ್ಠಾನಗೊಳಿಸಿದೆ. ಇದರಲ್ಲಿ ಗ್ರಾಮಗಳಲ್ಲಿನ ರಸ್ತೆ, ಚರಂಡಿ, ಕೆರೆಗಳಲ್ಲಿ ಹೂಳು ತೆಗೆಯುವುದು, ಸರ್ಕಾರಿ ಶಾಲೆ ಕಟ್ಟಡ ಸೇರಿದಂತೆ ಅನೇಕ ಅಭಿವೃದ್ದಿ ಕೆಲಸಗಳನ್ನ ನರೇಗಾ ಯೋಜನೆಯಲ್ಲಿ ಅಭಿವೃದ್ದಿ ಪಡಿಸುವುದರ ಜೊತೆಗೆ ಸ್ಥಳಿಯ ಕಾರ್ಮಿಕರಿಗೆ ದುಡಿಮೆ ನೀಡುವ ಯೋಜನೆ. ಆದರೆ ಕೋಲಾರ ತಾಲೂಕಿನಲ್ಲಿ ಆಗುತ್ತಿರುವುದೇ ಬೇರೆ. ಕೋಲಾರ ತಾಲೂಕಿನ ತೊಟ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಹೆಚ್ಚುವರಿಯಾಗಿ ಕ್ರಿಯಾ ಯೋಜನೆ ತಯಾರಿಸಿದ್ದು ಪಂಚಾಯಿತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದಿಸಿರುವ ಕಾಮಗಾರಿಗಳನ್ನು ಕೈಗೆತ್ತುಕೊಳ್ಳಲಾಗಿದೆ.

ಕಾಮಗಾರಿಗೆ ಯಂತ್ರಗಳ ಬಳಕೆ

ಕೆಲವು ಕಾಮಗಾರಿಗಳಿಗೆ ಮಾರ್ಗಸೂಚಿಯಲ್ಲಿ ಅನುಮೋದಿಸಿರುವ ಯಂತ್ರೋಪಕರಣಗಳನ್ನ ಮಾತ್ರ ಬಳಸಿಕೊಳ್ಳಕಬೇಕು ಎಂಬ ನಿಮಯ ಇರುವುದನ್ನೇ ನೆಪ ಮಾಡಿಕೊಂಡು ಎಲ್ಲ ಕಾಮಗಾರಿಗಳಿಗೆ ಹೆಚ್ಚಾಗಿ ಯಂತ್ರೋಪಕರಣಗಳನ್ನೇ ಬಳಸಲಾಗುತ್ತಿದೆ. ಇದರಿಂದಾಗಿ ಸ್ಥಳೀಯ ಕಾರ್ಮಿಕರಿಗೆ ಉದ್ಯೋಗ ಸಿಗದಂತಾಗಿದೆ. ತೊಟ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅನುದಾನಿತ ಶಾಂತಿನಿಕೇತನ ಪ್ರೌಡಶಾಲೆ ಕಾಂಪೌಂಡ್ ನಿರ್ಮಾಣ ಕಾಮಗಾರಿ ಶಾಲೆ ಬಳಿಯ ಚರಂಡಿ ಕಾಮಗಾರಿ ಹಾಗೂ ರಸ್ತೆ ಕಾಮಗಾರಿಗಳಿಗೆ ಜೆಸಿಬಿ ಯಂತ್ರಗಳನ್ನು ಬಳಸಿಕೊಂಡು ರಾತ್ರೋ ರಾತ್ರಿ ಕೆಲಸ ಮಾಡಲಾಗುತ್ತಿದೆ ಜೊತೆಗೆ ಈ ಎಲ್ಲಾ ಕಾಮಗಾರಿಗಳನ್ನು ಪಂಚಾಯತ್ ರಾಜ್ ಇಲಾಖೆ ಅನುಷ್ಠಾನಗೊಳಿಸಿದ್ದು ಸಂಪೂರ್ಣ ಜವಾಬ್ದಾರಿಯು ಪಂಚಾಯತ್ ಇಲಾಖೆಯದ್ದೇ ಆಗಿದೆ. ರಾತ್ರಿ ವೇಳೆ ಕಾಮಗಾರಿರಾತ್ರಿ ವೇಳೆ ಜೆಸಿಬಿ ಯಂತ್ರದ ಮೂಲಕ ಚರಂಡಿ ನಿರ್ಮಾಣಕ್ಕೆ ಹಳ್ಳ ತೋಡುವ ಕೆಲಸ ಭರದಿಂದ ಸಾಗಿದ್ದು ಸಾರ್ವಜನಿಕರೊಬ್ಬರು ಈ ಬಗ್ಗೆ ಪ್ರಶ್ನಿಸಿದ್ದಾರೆ ಅಲ್ಲದೆ ಪಂಚಾಯತ್ ರಾಜ್ ಇಲಾಖೆ ಗಮನಕ್ಕೂ ತರಲಾಗಿದೆ. ಆದರೆ ಅಧಿಕಾರಿಗಳು ಮಾತ್ರ ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸಿತ್ತಿದ್ದಾರೆ ಎಂಬುದು ಸ್ಥಳೀಯರ ಆರೋಪ. ಸ್ಥಳೀಯರನ್ನೇ ನರೇಗಾ ಯೋಜನೆಯ ಕಾಮಗಾರಿಗಳಿಗೆ ಬಳಸಿಕೊಳ್ಳಬೇಕೆಂಬ ನಿಯಮವಿದೆ, ಆದರೆ ತೊಟ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿರುವ ಕಾಮಗಾರಿಗಳಿಗೆ ಸ್ಥಳೀಯರನ್ನು ಹೊರತುಪಡಿಸಿ ವಲಸೆ ಕಾರ್ಮಿಕರನ್ನು ತಂದು ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ಸ್ಥಳೀಯ ಕೂಲಿ ಕಾರ್ಮಿಕರಿಗೆ ದುಡಿಮೆಯಿಲ್ಲದೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಪಂನಿಂದ ಅನುಮೋದನೆ

ನರೇಗಾ ಕಾಮಗಾರಿಗಳನ್ನು ಗುತ್ತಿಗೆದಾರರು ನಡೆಸುವಂತಿಲ್ಲ ಎನ್ನುವ ನಿಯಮವಿದ್ದರೂ ಕೋಲಾರ ತಾಲೂಕಿನ ಗುತ್ತಿಗೆದಾರರೊಬ್ಬರ ಮುಂದಾಳತ್ವದಲ್ಲಿ ಶಾಂತಿ ನಿಕೇತನ ಪ್ರೌಢ ಶಾಲೆಯ ಅಭಿವೃದ್ಧಿ ಕಾಮಗಾರಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಜಿಪಂನಿಂದ ಅನುಮೋದನೆ ನೀಡಿರುವ ಕಾರಣ ಕಾಮಗಾರಿಗಳನ್ನು ಮಾಡಿಸಲಾಗುತ್ತಿದೆ ಎನ್ನುತ್ತಾರೆ. ತೊಟ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಿ ಸುಮಾರಿ ೫೦ ಲಕ್ಷ ರು.ಗಳ ಕಾಮಗಾರಿಗಳನ್ನು ಪಂಚಾಯತ್ ರಾಜ್ ಇಲಾಖೆ ಅನುಷ್ಠಾನಗೊಳಿಸಿದೆ, ಈ ಪೈಕಿ ಹಲವಾರು ಕಾಮಗಾರಿಗಳು ಈಗಾಗಲೇ ಪ್ರಾರಂಭವಾಗಿದ್ದು ಯಥೇಚ್ಚವಾಗಿ ಯಂತ್ರೋಪಕರಣಗಳ ಬಳಕೆ ಮಾಡಲಾಗುತ್ತಿದೆ. ಜೊತೆಗೆ ಸ್ಥಳಿಯ ಕೂಲಿ ಕಾರ್ಮಿಕರಿಗೆ ಕೆಲಸ ನೀಡದೆ, ವಲಸೆ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ.

ಕೋಟ್................................

ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆದು ಕಾಮಗಾರಿ ನಡೆಸಲಾಗುತ್ತಿದೆ ಯಂತ್ರೋಪಕರಣ ಬಳಕೆ ಕಂಡು ಕಾಮಗಾರಿಯಲ್ಲಿ ಅಕ್ರಮ ಎಂದು ಕಂಡು ಬಂದರೆ ಕ್ರಮ ವಹಿಸಲಾಗುವುದು. - ಅನಂತ, ಎಇಇ, ಪಿಅರ್‌ಇಡಿ ಉಪ ವಿಭಾಗ.

ಕೋಟ್.....................

ನರೇಗಾ ಯೊಜನೆಯಲ್ಲಿ ನಡೆಸಲಾಗುತ್ತಿರುವ ಕಾಮಗಾರಿಗಳಿಗೆ ಸ್ಥಳಿಯರನ್ನು ಹೊರತು ಪಡಿಸಿ ಗುತ್ತಿಗೆದಾರರ ಮೂಲಕ ವಲಸೆ ಕಾರ್ಮಿಕರನ್ನು ಬಳಸಿ ಕಾಮಗಾರಿ ನಡೆಸಲಾಗುತ್ತಿದೆ. ಅಲ್ಲದೆ ಕಾಮಗಾರಿಗೆ ಯಂತ್ರೋಪಕರಣ ಬಳಸುತ್ತಿದ್ದಾರೆ, ಈ ಬಗ್ಗೆ ಪಿಅರ್‌ಇಡಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುತ್ತಿಲ್ಲ, ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಓ ಅವರಿಗೆ ದೂರು ಸಲ್ಲಿಸಲಾಗುವುದು. - ನವೀನ್ ಕುಮಾರ್‌, ಕೆಂಬತ್ನಹಳ್ಳಿ ಗ್ರಾಪಂ ಸದಸ್ಯ.

೨೦ಕೆಎಲ್‌ಆರ್-೮....................ಕೋಲಾರ ತಾಲೂಕಿನ ತೊಟ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ನಿಯಮ ಉಲ್ಲಂಘಿಸಿ ಕಾಮಗಾರಿಗೆ ಯಂತ್ರ ಬಳಸುತ್ತಿರುವು.