ಸಾರಾಂಶ
ತೋಟಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾದ ಬಳಕೆ ವಿಶೇಷ ಉಪನ್ಯಾಸ
ಕನ್ನಡಪ್ರಭ ವಾರ್ತೆ, ಶೃಂಗೇರಿಕೃಷಿ ಕ್ಷೇತ್ರದಲ್ಲಿ ಇಂದು ಹಿಂದಿನಂತಿಲ್ಲ. ಸಾಕಷ್ಠು ಬದಲಾವಣೆಗಳಾಗಿವೆ. ಕೃಷಿಯಲ್ಲಿ ಉತ್ಪಾದಕತೆ, ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನಗಳ ಬಳಕೆ ಅನಿವಾರ್ಯವಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀ ಕೃಷ್ಣ ಹೇಳಿದರು.
ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ ಕೋಶ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಯೋಜೆಸಲಾಗಿದ್ದ ತೋಟಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾದ ಬಳಕೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.ಹವಾಮಾನ ವೈಪರಿತ್ಯ ಹಾಗೂ ಜಾಗತಿಕ ತಾಪಮಾನದ ಪರಿಣಾಮವಾಗಿ ಕೃಷಿ ಕ್ಷೇತ್ರದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಮಳೆ, ಹವಾಮಾನದ ಪರಿಣಾಮ ಸಕಾಲದಲ್ಲಿ ಕೃಷಿ ಚಟುವಟಿಕೆಗಳು ನಡೆಯಲು ವ್ಯತ್ಯಯಗಳು ಉಂಟಾಗುತ್ತಿದೆ. ತೋಟಗಾರಿಕೆ ಲಾಭದಾಯಕ ಉದ್ಯಮವಾಗಿದೆ. ಕೃಷಿ, ತೋಟಗಾರಿಕೆಯನ್ನು ಉಪಕಸುಬನ್ನಾಗಿ ಮಾಡಿಕೊಳ್ಳಬೇಕು.
ಇಂದು ಕೃಷಿಯಿಂದ ವಿಮುಖರಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಾಂಪ್ರದಾಯಿಕ ಕೃಷಿ ಕಣ್ಣರೆಯಾಗುತ್ತಿದೆ. ಯುವಜನತೆ ಕೃಷಿ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಕೃಷಿ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಕೃಷಿ ಉಪಕಸುಬನ್ನಾಗಿ ಸ್ವೀಕರಿಸಬೇಕು.ಕೃಷಿ ಚಟುವಟುಕೆಯನ್ನು ಉದ್ಯೋಗವನ್ನಾಗಿ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ. ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಇನ್ನಷ್ಟು ಅಭಿವೃದ್ದಿಪಡಿಸಲು ಸಾಧ್ಯ ಎಂದರು.
ಪ್ರಾಂಶುಪಾಲರಾದ ಶ್ರೀಮತಿ ಭಾರತೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗದ ಬಿಂಬ ಮತ್ತಿತರರು ಇದ್ದರು. ಚೇತನ್ ಸ್ವಾಗತಿಸಿ ನಿರೂಪಿಸಿ ವಂದಿಸಿದರು.24 ಶ್ರೀ ಚಿತ್ರ 1-ಶೃಂಗೇರಿ ಮೆಣಸೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ತೋಟಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಕುರಿತ ಉಪನ್ಯಾಸ ನೀಡಿದರು.ಪ್ರಾಂಶುಪಾಲರಾದ ಭಾರತೀ ಮತ್ತಿತರರು ಇದ್ದರು.