ಸಾರಾಂಶ
ಕನ್ನಡಪ್ರಭ ವಾರ್ತೆ ಮಾಲೂರು
ಶಿಥಿಲಗೊಂಡಿರುವ ಬೃಹತ್ ನೀರಿನ ಟ್ಯಾಂಕ್ ಅನ್ನು ತೆರವುಗೊಳಿಸಿ ಆ ಜಾಗವನ್ನು ನೂತನ ಬಸ್ ನಿಲ್ದಾಣಕ್ಕೆ ಬಳಸಿಕೊಳ್ಳಲಾಗುವುದು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.ಅವರು ಪಟ್ಟಣದ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ನೂತನ ಬಸ್ ನಿಲ್ದಾಣಕ್ಕಾಗಿ ಗುರುತಿಸಲ್ಪಟ್ಟಿದ್ದ ಉದ್ಯಾನವನದ ಜಾಗವನ್ನು ಪರಿಶೀಲಿಸಿ ಮಾತನಾಡಿದರು.
ನಿಲ್ದಾಣಕ್ಕೆ ಉದ್ಯಾನದ ಜಾಗಉದ್ಯಾನವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ,ವಿವೇಕಾನಂದ ಪುತ್ಥಳಿಗೆ ಯಾವುದೇ ತೊಂದರೆ ಆಗದಂತೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಅವತ್ಯವಿರುವಷ್ಟು ಜಾಗವನ್ನು ಮಾತ್ರ ಉಪಯೋಗಿಸಕೊಳ್ಳಲಾಗುವುದು. ಈ ಉದ್ಯಾನವನನ್ನು ಸಹ ಒಂದು ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಬಸ್ ನಿಲ್ದಾಣಕ್ಕೆ ಬರುವ ರಸ್ತೆಯನ್ನು ಆಗಲೀಕರಣ ಮಾಡಬೇಕಾಗಿರುವುದರಿಂದ ಮಾರಿಕಾಂಬ ಮಹಾದ್ವಾರವನ್ನು ತೆರೆವುಗೊಳಿಸಿ ಮತ್ತೇ ಭವ್ಯವಾಗಿ ನಿರ್ಮಿಸಿಕೊಡಲಾಗುವುದು ಎಂದರು.
₹19 ಕೋಟಿ ವೆಚ್ಚದ ಯೋಜನೆಇಲ್ಲಿನ ಬಸ್ ನಿಲ್ದಾಣವನ್ನು ೧೯ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಈ ಯೋಜನೆಯಲ್ಲೂ ಮಾಲೂರು ಪ್ರಾಧಿಕಾರದ ಅನುದಾನವನ್ನು ಉಪಯೋಗಿಸಿಕೊಳ್ಳಲಾಗಿದೆ. ತಾಲೂಕಿನ ಎಲ್ಲ ಅಭಿವೃದ್ಧಿ ಕಾರ್ಯಗಳು ಮುಂದಿನ ವರ್ಷದೊಳಗೆ ಪ್ರಾರಂಭವಾಗದಲಿವೆ. ಕೆಲವೊಂದು. ಪಟ್ಟಣದ ಎಲ್ಲ ೨೭ ವಾರ್ಡ್ ಗಳ ರಸ್ತೆ,ಚರಂಡಿಗಳನ್ನು ಒಟ್ಟು ೫೬ ಕೋಟಿ ವೆಚ್ಚದಲ್ಲಿ ಉನ್ನತಿಕರಿಸಲು ಈಗಾಗಲೇ ಡಿಪಿಆರ್ ರೆಡಿ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ.ರಮೇಶ್, ಮುಖ್ಯಾಧಿಕಾರಿ ಪ್ರದೀಪ್ ಕುಮಾರ್, ಪುರಸಭೆ ಅಧ್ಯಕ್ಷೆ ಕೋಮಲ ನಾರಾಯಣ್, ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ಎ.ರಾಜಪ್ಪ, ಪ್ರಾಧಿಕಾರದ ಅಧ್ಯಕ್ಷ ನಯೀಂ, ಕಾರ್ಯದರ್ಶಿ ಕೃಷ್ಣಪ್ಪ, ಕೃಷ್ಣಪ್ಪ, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಧುಸೂಧನ್ ಇದ್ದರು.