ಸಿ.ಟಿ.ರವಿ ವಿರುದ್ಧ ಅವಾಚ್ಯ ಶಬ್ದ ಬಳಕೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

| Published : Feb 01 2024, 02:02 AM IST

ಸಿ.ಟಿ.ರವಿ ವಿರುದ್ಧ ಅವಾಚ್ಯ ಶಬ್ದ ಬಳಕೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಶಿಸ್ತಿನ ಪಕ್ಷ. ಅದರಡಿಯಲ್ಲಿಯೇ ನಾಯಕರು ಕೆಲಸ ನಿರ್ವಹಿಸುತ್ತಿದ್ದಾರೆ. ಸುಸಂಸ್ಕೃತ ನಡವಳಿಕೆ ಬಿಜೆಪಿ ಪಕ್ಷದವರಲ್ಲ. ರಾಜಕಾರಣದಲ್ಲಿ ಯಾವ ರೀತಿ ಮಾತನಾಡಬೇಕು ಎಂಬುವುದನ್ನು ಅರಿತುಕೊಳ್ಳಬೇಕು. ಮುಖ್ಯಮಂತ್ರಿಗಳು ರಾಷ್ಟ್ರಪತಿಗಳ ವಿರುದ್ಧ ಏಕವಚನದಲ್ಲಿ ಪ್ರಯೋಗ ಮಾಡುತ್ತಾರೆ. ಮಾತನಾಡುವಾಗ ಯೋಚಿಸಿ ಅದೇ ರೀತಿ ಅವಾಚ್ಯ ಶಬ್ಧ ಬಳಸಿದರೇ ಜನರೇ ಬುದ್ಧಿ ಕಲಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ಅವಾಚ್ಯ ಶಬ್ಧ ಬಳಕೆ ಮಾಡಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಮುಖಂಡ ಮುನಿರಾಜು ಆಗ್ರಹಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಖಂಡಿಸಿ ನಡೆದ ಮೆರವಣಿಗೆ ವೇಳೆ ಮಾಜಿ ಸಚಿವ ಸಿ.ಟಿ.ರವಿ ಅವರು ನಾವು ಹಾರಿಸಿದ್ದು ಹನುಮ ಧ್ವಜವೇ ಹೊರತು ತಾಲಿಬಾನ್ ಧ್ವಜವಲ್ಲ ಎಂದು ಹೇಳಿದ್ದಾರೆ. ಆದರೆ, ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರು ಸಿ.ಟಿ.ರವಿ ಅವರ ಹೇಳಿಕೆ ತಿರುಚಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆಂದು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಶಿಸ್ತಿನ ಪಕ್ಷ. ಅದರಡಿಯಲ್ಲಿಯೇ ನಾಯಕರು ಕೆಲಸ ನಿರ್ವಹಿಸುತ್ತಿದ್ದಾರೆ. ಸುಸಂಸ್ಕೃತ ನಡವಳಿಕೆ ಬಿಜೆಪಿ ಪಕ್ಷದವರಲ್ಲ. ರಾಜಕಾರಣದಲ್ಲಿ ಯಾವ ರೀತಿ ಮಾತನಾಡಬೇಕು ಎಂಬುವುದನ್ನು ಅರಿತುಕೊಳ್ಳಬೇಕು. ಮುಖ್ಯಮಂತ್ರಿಗಳು ರಾಷ್ಟ್ರಪತಿಗಳ ವಿರುದ್ಧ ಏಕವಚನದಲ್ಲಿ ಪ್ರಯೋಗ ಮಾಡುತ್ತಾರೆ. ಮಾತನಾಡುವಾಗ ಯೋಚಿಸಿ ಅದೇ ರೀತಿ ಅವಾಚ್ಯ ಶಬ್ಧ ಬಳಸಿದರೇ ಜನರೇ ಬುದ್ಧಿ ಕಲಿಸಲಿದ್ದಾರೆ ಎಂದರು.

ಕೆರೆಗೋಡಿನಲ್ಲಿ ಚಂದ ವಸೂಲಿ ಮಾಡಿ ಧ್ವಜಸ್ತಂಭ ನಿರ್ಮಿಸಿ ಹನುಮ ಧ್ವಜವನ್ನು ಹಾರಿಸಿದ್ದಾರೆ. ಆದರೆ, ರಾತ್ರೋರಾತ್ರಿ ಹನುಮ ಧ್ವಜವನ್ನು ಕೆಳಗಿಳಿಸಿ ಮಧ್ಯಾಹ್ನದಲ್ಲಿ ರಾಷ್ಟ್ರಧ್ವಜ ಹಾರಿಸುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದ್ದಾಗಿದೆ. ಈ ಘಟನೆಯನ್ನು ಖಂಡಿಸಿ ಫೆ.9 ರಂದು ಮಂಡ್ಯ ಬಂದ್ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದವರು ವಿವಿಧ ಸಂಘಟನೆಗಳ ಮೂಲಕ ಪ್ರತಿಭಟನೆ ಮಾಡಿಸುತ್ತಿದ್ದಾರೆ ಎಂದು ದೂರಿದರು.

ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರ ನಾಯಕರು ಯಾರೇ ಅಭ್ಯರ್ಥಿಯನ್ನಾಗಿ ಮಾಡಿದ್ದರೂ ಕೂಡ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಲ್ಲಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆಂದು ಹೇಳಿದರು.

ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಮಾತನಾಡಿ, ಸಿ.ಟಿ.ರವಿ ಬಿಜೆಪಿ ಪಕ್ಷದಲ್ಲಿ ಹಲವು ಅಧಿಕಾರವನ್ನು ಪಡೆದು ರಾಜ್ಯ ನಾಯಕರಾಗಿದ್ದಾರೆ. ಅವರ ಬಗ್ಗೆ ಅವಹೇಳನಕಾರಿಯಾಗಿ ಶಾಸಕ ನರೇಂದ್ರಸ್ವಾಮಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷಮೆಯಾಚಿಸಿ ಪದ ಬಳಕೆ ವಾಪಸ್ ಪಡೆಯಬೇಕು. ಇಲ್ಲದಿದ್ದರೇ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಜೊತೆಗೂಡಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕೃಷ್ಣ, ಮಧುಗಂಗಾಧರ್, ದೇವರಾಜ್, ಚಿಕ್ಕಣ್ಣ, ಕುಮಾರಸ್ವಾಮಿ, ಅಶೋಕ್, ಕೆ.ಸಿ ನಾಗೇಗೌಡ, ಮಹೇಶ್, ಶಶಿ, ಕಾಂತರಾಜು ಸೇರಿದಂತೆ ಇತರರು ಇದ್ದರು.