ಸಾರಾಂಶ
- ಹೊಸಹಳ್ಳಿಯಲ್ಲಿ ಜೆಎಂಎಂ ಇನ್ನಿತರ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ
- - -ಕನ್ನಡಪ್ರಭ ವಾರ್ತೆ ಹೊನ್ನಾಳಿ
ನೀರು ಪ್ರಕೃತಿದತ್ತ ಆಮೂಲ್ಯವಾದ ಸಂಪತ್ತು. ಈ ಜೀವಜಲವನ್ನು ಹಿತಮಿತವಾಗಿ ಬಳಸಿ, ನಮ್ಮ ಮುಂದಿನ ಪೀಳಿಗೆಗೂ ಉಳಿಸುವುದು ಪ್ರ.ತಿಯೊಬ್ಬರ ಆದ್ಯ ಕರ್ತವ್ಯ ಹಾಗೂ ಸಾಮಾಜಿಕ ಜವಾಬ್ದಾರಿ ಆಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗೇವಾಡಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಉದ್ಘಾಟನೆ, ಹೊಸಹಳ್ಳಿ ಗ್ರಾಮದಲ್ಲಿ ನೂತನ ಬಸ್ ನಿಲ್ದಾಣ, ಅರಿವು ಕೇಂದ್ರ, ಗ್ರಂಥಾಲಯ, ಶಾಲಾ ನೂತನ ಕಟ್ಟಡ, ಅಂಚೆ ಕಚೇರಿ, ಶಾಲೆಗಳ ಶೌಚಾಲಯ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೊಬ್ಬರ ಮಾರಾಟ ಕೇಂದ್ರ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದಾವಣಗೆರೆ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ (ಜೆ.ಜೆ.ಎಂ.) ಮನೆ ಮನೆಗೆ ಶುದ್ಧ ಕಡಿಯುವ ನೀರು ಯೋಜನೆ ಪ್ರಥಮ ಸ್ಥಾನದಲ್ಲಿದೆ. ಹೊನ್ನಾಳಿ ತಾಲೂಕಿನಲ್ಲಿ 8, ನ್ಯಾಮತಿ ತಾಲೂಕಿನಲ್ಲಿ 12 ಈಗಾಗಲೇ ಉದ್ಘಾಟನೆಗೊಂಡು ದಿನ 24 ಗಂಟೆ ಮನೆ ಮನೆಗೆ ನೀರು ಪೂರೈಕೆ ಕಾರ್ಯನಿರ್ವಹಿಸಲಾಗುತ್ತಿದೆ. ಇದರಿಂದ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ. ಈಗಾಗಲೇ ತಾಲೂಕಿನಲ್ಲಿ ₹450 ಕೋಟಿ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಅನುದಾನ ತರಲಾಗಿದೆ. ಜನತೆ ಅಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಗ್ಯಾರಂಟಿ ಯೋಜನೆಗಳು ಕೂಡ ಇಡೀ ದೇಶದಲ್ಲಿ ಕರ್ನಾಟಕ ಮಾದರಿಯಾಗಿದೆ ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ್ ವಿಠಲ್ ರಾವ್, ಮಾತನಾಡಿ, ಜೆ.ಜೆ.ಎಂ. ಯೋಜನೆ ವತಿಯಿಂದ ಈಗಾಗಲೇ ರಾಜ್ಯದಲ್ಲಿ ದಾವಣಗೆರೆ ಜಿಲ್ಲೆಯ 51 ಗ್ರಾಮಗಳಲ್ಲಿ ದಿನದ 24 ಗಂಟೆಯೂ ಜೆ.ಜೆ.ಎಂ. ಅಡಿಯಲ್ಲಿ ನೀರು ಪೊರೈಸಲಾಗುತ್ತಿದೆ. ಜನರು ಸಹ ಸಮಗ್ರವಾಗಿ ನೀರನ್ನು ಬಳಸಿಕೊಳ್ಳುತ್ತಿದ್ದಾರೆ. ವಿಶ್ವ ಬ್ಯಾಂಕಿನವರು ಸಹ ದಾವಣಗೆರೆ ಜಿಲ್ಲೆಯನ್ನೇ ಮಾದರಿಯಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ತು ಸದಸ್ಯ ಡಿ.ಎಸ್. ಅರುಣ್ ಕುಮಾರ್ ಮಾತನಾಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಸೀನಾ ಜಾನ್, ಉಪಾಧ್ಯಕ್ಷೆ ರತ್ನಮ್ಮ, ತಾ.ಪಂ. ಇ.ಒ. ಪ್ರಕಾಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸೋಮ್ಲಾನಾಯ್ಕ, ಗ್ರಾ.ಪಂ. ಪಿಡಿಒ ಶಿವಕುಮಾರ್, ಮುಖಂಡರಾದ ಎಚ್.ಎ. ಗದ್ದಿಗೇಶ್, ಚಂದ್ರಪ್ಪ, ಗ್ರಾ.ಪಂ,. ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.- - -
-30ಎಚ್.ಎಲ್.ಐ1.ಜೆಪಿಜಿ:ಹೊನ್ನಾಳಿ ತಾಲೂಕಿನ ಹೊಸಹಳ್ಳಿಯಲ್ಲಿ ಜೆಜೆಎಂ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆಯ ವೇದಿಕೆ ಕಾರ್ಯಕ್ರಮಕ್ಕೆ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿದರು.