ಮಕ್ಕಳು ಎಲ್ಲಾ ಚಟುವಟಿಕೆ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಎಲ್ಲಾ ಮಕ್ಕಳು ಗೆದ್ದಂತೆ ಎಂದು ಶಿಕ್ಷಣ ಸಂಯೋಜಕ ತಿಪ್ಪೇಸ್ವಾಮಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಅಜ್ಜಂಪುರ
ಮಕ್ಕಳು ಎಲ್ಲಾ ಚಟುವಟಿಕೆ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಎಲ್ಲಾ ಮಕ್ಕಳು ಗೆದ್ದಂತೆ ಎಂದು ಶಿಕ್ಷಣ ಸಂಯೋಜಕ ತಿಪ್ಪೇಸ್ವಾಮಿ ತಿಳಿಸಿದರು.ಮಂಗಳವಾರ ಅಜ್ಜಂಪುರದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆದ ಶ್ರೀ ವಿದ್ಯಾಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಯಾವುದೇ ವೇದಿಕೆಗಳು ಸಿಕ್ಕಾಗ ಮಕ್ಕಳು ಉಪಯೋಗಿಸಿಕೊಂಡರೆ ನಿಮ್ಮಲ್ಲಿರುವ ಸೂಕ್ತವಾಗಿರುವ ಪ್ರತಿಭೆಗಳು ಹೊರಬರಲು ಸಾಧ್ಯ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯ ನಿಸ್ಸಾರ್ ಅಹಮದ್ ಮಾತನಾಡಿ, ಮಕ್ಕಳು ಶಿಕ್ಷಣ ಪಡೆದು ಉನ್ನತ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗೇರಿ ತಂದೆ, ತಾಯಿಗಳಿಗೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು.ಈ ಸಮಾರಂಭದಲ್ಲಿ ಉಪಾಧ್ಯಕ್ಷ ಕವಿತಾ ಕೇಶವಮೂರ್ತಿ ಸುಮಲತ ಮಲ್ಲಿಕಾರ್ಜುನ್, ಬಿಂದು, ಯತೀಶ್, ತೀರ್ಥಪ್ರಸಾದ್, ಅಧ್ಯಕ್ಷರಾದ ಎ.ಜೆ.ರೇವಣ್ಣನವರು ಮಕ್ಕಳಿಗೆ ಹಿತವಚನ ಹೇಳಿದರು.
ಲೀಲಾವತಿ.ಟಿ ಕಾರ್ಯಕ್ರಮ ಉದ್ಘಾಟಿಸಿದರು.ಸಂಸ್ಥೆಯ ಕಾರ್ಯದರ್ಶಿ ಎ.ಎಲ್.ನಾಗೇಶ್ ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾ ಪಬ್ಲಿಕ್ ಶಾಲೆಯ ಸಂಸ್ಥಾಪಕ ಲಕ್ಷ್ಮಣಪ್ಪ ನವರ ಹೆಸರಿನಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳೊಂದಿಗೆ ಗೌರವಿಸಲಾಯಿತು.ಆಡಳಿತ ವರ್ಗದ ನಿರ್ದೇಶಕಿ ರೇಖಾ ಶಾಲಾ ಶಿಕ್ಷಕರಿಗೆ ಸಿಬ್ಬಂದಿ ವರ್ಗದವರಿಗೆ ನೆನಪಿನ ಕಾಣಿಕೆಯೊಂದಿಗೆ ಗೌರವಿಸಿದರು. ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಶಾಲಾ ಮಕ್ಕಳಿಂದ ರೈತ ನೃತ್ಯಗೀತೆ ಅತ್ಯುತ್ತಮವಾಗಿ ಮೂಡಿಬಂದಿತು.